ಹಾಸನ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ವೊಂದು ರಸ್ತೆ ಬದಿಯ ಹಳ್ಳಕ್ಕೆ ಜಾರಿದ ಘಟನೆ ನಗರದ ಹೊರವಲಯದ ಸಂಕೇನಹಳ್ಳಿ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಜಾರಿದ ಶಾಲಾ ಬಸ್: ನಾಲ್ವರು ಮಕ್ಕಳಿಗೆ ಗಾಯ - hasan
ಮೂವತ್ತು ಮಕ್ಕಳಿದ್ದ ಶಾಲಾ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಜಾರಿದೆ.
ಮೂವತ್ತು ಮಕ್ಕಳಿದ್ದ ಶಾಲಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಚಿರಂತನ ಶಾಲೆಗೆ ಸೇರಿದ ಬಸ್ ಎಂದಿನಂತೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿತ್ತು. ಮೂವತ್ತಕ್ಕೂ ಹೆಚ್ಚು ಮಕ್ಕಳು ಬಸ್ನಲ್ಲಿದ್ದರು. ಈ ವೇಳೆ ತುಸು ವೇಗವಾಗಿ ಚಲಿಸುತ್ತಿದ್ದ ಬಸ್ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಜಾರಿದೆ.
ಬಸ್ನಲ್ಲಿದ್ದ ಮಕ್ಕಳ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.