ಹಾಸನ: ಬಿಜೆಪಿ ಅಧಿಕಾರದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಬಜೆಟ್ ಮಂಡಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ.
ದೇಶದ ಆರ್ಥಿಕ ಪರಿಸ್ಥಿತಿ ಮೇಲೆತ್ತುವ ಬಜೆಟ್ ಮಂಡಿಸಬೇಕು: ಹೆಚ್.ಕೆ. ಕುಮಾರಸ್ವಾಮಿ - central budget tomorrow
ಬಿಜೆಪಿ ಅಧಿಕಾರದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಬಜೆಟ್ ಮಂಡಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಫಿ, ಏಲಕ್ಕಿ ಬೆಲೆ ಸಾಕಷ್ಟು ಕುಸಿದಿದ್ದು, ಬೆಳೆಗಾರರು ಕಷ್ಟದಲ್ಲಿದ್ದಾರೆ. ಸಾಂಬಾರ್ ಪದಾರ್ಥಗಳ ಬೆಲೆ ಹೆಚ್ಚಿಸಬೇಕು. ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿರಂತರವಾಗಿ ನಡೆಯುತ್ತಿದೆ. 6 ವರ್ಷದ ಹಿಂದೆ ಸಕಲೇಶಪುರದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ಪ್ರಸ್ಥಾವನೆ ಸಲ್ಲಿಸಿಲಾಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಇನ್ನೂ ಸ್ಪಂದಿಸಿಲ್ಲ ಎಂದರು.
ಈ ಬಜೆಟ್ನಲ್ಲಿ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಬೇಕು. ಇನ್ನು ಮೋದಿ ಅವರ ಆಡಳಿತದಲ್ಲಿ ನಿರುದ್ಯೊಗ ಸಮಸ್ಯೆ ತಾಂಡವಾಡುತ್ತಿದೆ. ನಮ್ಮ ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಏರ್ ಇಂಡಿಯಾ ಸಂಸ್ಥೆಯನ್ನ ಖಾಸಗೀಕರಣ ಮಾಡಲೆಂದು ಹೊರಟಿದ್ದಾರೆ. ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದು ಹೆಚ್ ಕೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.