ಹಾಸನ:ಕಸಾಯಿಖಾನೆಗೆ ಸಾಗಿಸುತ್ತಿದ್ದ ಎಂಟು ರಾಸುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕಸಾಯಿಖಾನೆಗೆ ಸಾಗಿಸುತ್ತಿದ್ದ 8 ಹಸು ರಕ್ಷಣೆ - ಕಸಾಯಿಖಾನೆಗೆ ಸಾಗಿಸುತ್ತಿದ್ದ8 ಹಸು ರಕ್ಷಣೆ
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 8 ಹಸುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ನಗರದ ಸಂತೆಪೇಟೆ ವೃತ್ತದಿಂದ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿರುವುದನ್ನು ತಡೆದ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ನಗರ ಠಾಣೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಾಹನ ಚಾಲಕ ಜಾಕೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ನಾಲ್ಕೈದು ಜನರು ಸ್ಥಳದಿಂದ ಪರಾರಿಯಾಗಿದ್ದಾರೆ.
ನಾಲ್ಕೈದು ವಾಹನಗಳಲ್ಲಿ ರಾಸುಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಬೆನ್ನತ್ತಿ ಒಂದು ಗಾಡಿಯನ್ನು ಹಿಡಿದಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಟೋಲ್‌ನಲ್ಲಿ ಸರಿಯಾಗಿ ತಪಾಸಣೆ ನಡೆಸಿದ್ದರೆ ಎಲ್ಲ ರಾಸುಗಳನ್ನು ಕಾಪಾಡಬಹುದಿತ್ತು ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.ಶ್ರೀರಾಮ ಸೇನೆ ಕಾರ್ಯಕರ್ತರಾದ ಮನು, ಆನಂದ್, ಚೇತನ್ ಸೋಮಶೇಖರ್,ಯೋಗೀಶ್, ಸೋಮು ಹಸುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Eight cows rescued in hasan