ಕರ್ನಾಟಕ

karnataka

ETV Bharat / state

ಪ್ರಜ್ವಲ್​​​ ರೇವಣ್ಣಗೆ ಸಂಕಷ್ಟ... ಆಸ್ತಿ ವಿವರ ಮರುಪರಿಶೀಲನೆಗೆ ಚುನಾವಣಾ ಆಯೋಗ ನೋಟಿಸ್​​​ - ಚುನಾವಣಾಧಿಕಾರಿ

ವಿವಿಧ ಕಂಪನಿಗಳಲ್ಲಿ ಪ್ರಜ್ವಲ್ ರೇವಣ್ಣ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆ ವೇಳೆ ಇದರ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿ ಎ.ಮಂಜು ಕೂಡ ಪ್ರಜ್ವಲ್ ಅವರ ಆಸ್ತಿ ವಿವರದ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು.

ಪ್ರಜ್ವಲ್​ ರೇವಣ್ಣ

By

Published : Apr 13, 2019, 10:09 PM IST

ಹಾಸನ: ಪ್ರಜ್ವಲ್ ಅವರ ನಾಮಪತ್ರದಲ್ಲಿ ಒದಗಿಸಿರುವ ಆಸ್ತಿ ವಿವರಗಳನ್ನು ಮರುಪರಿಶೀಲನೆಗೆ ಒಳಪಡಿಸುವಂತೆ ರಾಜ್ಯ ಚುನಾವಣಾ ಆಯೋಗವು ಜಿಲ್ಲಾಧಿಕಾರಿಗಳಿಗೆ ಮತ್ತು ಚುನಾವಣಾಧಿಕಾರಿಗೆ ನೋಟಿಸ್ ನೀಡಿದೆ.

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಗೌಪ್ಯವಾಗಿಟ್ಟು ತಪ್ಪು ಮಾಹಿತಿ ನೀಡಿದ್ದಾರೆಂದು ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಪರಿಶೀಲಿಸಿದ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್ ನೀಡಿದೆ.

ವಿವಿಧ ಕಂಪನಿಗಳಲ್ಲಿ ಪ್ರಜ್ವಲ್ ರೇವಣ್ಣ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆ ವೇಳೆ ಇದರ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿ ಎ.ಮಂಜು ಕೂಡ ಪ್ರಜ್ವಲ್ ಅವರ ಆಸ್ತಿ ವಿವರದ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಪ್ರಜ್ವಲ್ ಎರಡು ಖಾಸಗಿ ಕಂಪನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಅವುಗಳ ಕುರಿತು ಆಸ್ತಿ ವಿವರದಲ್ಲಿ ತಿಳಿಸದೇ ವಂಚಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಅಧಿಕಾರ್ ವೆಂಚರ್ಸ್, ಎಲ್‌ಎಲ್‌ಪಿ ಮತ್ತು ಡ್ರೋನ್ ವರ್ಕ್‌ಫೋರ್ಸ್ ಎಂಬ ಕಂಪನಿಗಳಲ್ಲಿ ಶೇ. 20ರಿಂದ ಶೇ. 25ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅವರ ತಾಯಿ ಭವಾನಿ ರೇವಣ್ಣ ಕೂಡ ಕಂಪನಿಯಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಅವುಗಳ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ಟಿ.ಜೆ.ಅಬ್ರಹಾಂ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ABOUT THE AUTHOR

...view details