ಅರಕಲಗೂಡು:ಪಟ್ಟಣ ಪಂಚಾಯಿತ್ ಅಧ್ಯಕ್ಷ/ಉಪಾಧ್ಯಕ್ಷ ಚುನಾವಣೆ ಶುಕ್ರವಾರ ನಡೆಯಲಿದೆ. ಪಟ್ಟಣ ಪಂಚಾಯಿತಿಯಲ್ಲಿ 17 ಸದಸ್ಯರ ಬಲವಿದೆ. ಈ ಪೈಕಿ ಕಾಂಗ್ರೆಸ್ 5, ಜೆಡಿಎಸ್ 7 ಹಾಗೂ ಬಿಜೆಪಿಯ 6 ಮಂದಿ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ಬಿ ಗೆ ಮೀಸಲಾಗಿದೆ.
ಶುಕ್ರವಾರ ಅರಕಲಗೂಡು ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ - ಅರಕಲಗೂಡು ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ
ಜೆಡಿಎಸ್, ಬಿಜೆಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ನೆರವು ಅಗತ್ಯವಾಗಿದೆ. ನಿನ್ನೆ ನಡೆದ ಕ್ಷಿಪ್ರ ಗತಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಅಜ್ಙಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಅರಕಲಗೂಡು ಪಟ್ಟಣ ಪಂಚಾಯತ್ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ
ಜೆಡಿಎಸ್, ಬಿಜೆಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ನೆರವು ಅಗತ್ಯವಾಗಿದೆ. ನಿನ್ನೆ ನಡೆದ ಕ್ಷಿಪ್ರ ಗತಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಜೆಡಿಎಸ್ನಿಂದ ಹೂವಣ್ಣ, ಕೃಷ್ಣಯ್ಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ, ಕಾಂಗ್ರೆಸ್ ನಿಂದ ಪ್ರದೀಪ್, ಅನಿಕೇತನ, ಶಾರದ ಪೃಥ್ವಿರಾಜ್ ಆಕಾಂಕ್ಷಿಗಳಾಗಿದ್ದಾರೆ ಎನ್ನಲಾಗಿದೆ.