ಹಾಸನ: ವಿದ್ಯುತ್ ಕಂಬದಲ್ಲಿ ವಿದ್ಯುತ್ ಹರಿದ ಹಿನ್ನೆಲೆಯಲ್ಲಿ ಮೈ ಉಜ್ಜಿಕೊಳ್ಳಲು ಹೋದ ಹಸುವೊಂದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ ನಡೆದಿದೆ.
ಕಂಬಕ್ಕೆ ಮೈ ಉಜ್ಜಿಕೊಳ್ಳುತ್ತಿದ್ದ ಹಸು ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಸಾವು - undefined
ವಿದ್ಯುತ್ ಕಂಬಕ್ಕೆ ಮೈ ಉಜ್ಜಿಕೊಳ್ಳಲು ಹೋದ ಹಸುವೊಂದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.
ವಿದ್ಯುತ್ ಸ್ಪರ್ಶ ಹಿನ್ನೆಲೆ ಹಸು ಸಾವು
ಮಡಿಗೆರೆ ಗ್ರಾಮದ ಮೋಹನ್ ಕುಮಾರ್ ಎಂಬುವರಿಗೆ ಸೇರಿದ ಹಸು ಇದಾಗಿದೆ.ಇನ್ನು ಈ ಸಂಬಂಧ ಜಾನುವಾರು ಮಾಲೀಕರಾದ ಮೋಹನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಲವು ಬಾರಿ ವಿದ್ಯುತ್ ಕಂಬವನ್ನ ಸರಿ ಪಡಿಸುವಂತೆ ವಿದ್ಯುತ್ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮಳೆಗಾಲ ಪ್ರಾರಂಭವಾಗಿದ್ದರಿಂದಲೇ ಈ ಘಟನೆ ಸಂಭವಿಸಿದೆ. ಇದಕ್ಕೆಲ್ಲ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ದೂರು ನೀಡಿದ್ದಾರೆ.