ಕರ್ನಾಟಕ

karnataka

ETV Bharat / state

ಕಾಡಾನೆ ದಾಳಿಗೆ ಮತ್ತೊಬ್ಬ ಕೃಷಿ ಕಾರ್ಮಿಕ ಬಲಿ: ಅರಣ್ಯ ಇಲಾಖೆ ವಿರುದ್ಧ ಮಲೆನಾಡು ರೈತರ ಆಕ್ರೋಶ - Elephant Attack Sakleshpura reason

ಸಕಲೇಶಪುರದ ಮತ್ತೊಬ್ಬ ಕಾರ್ಮಿಕ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೃಷಿ ಕೆಲಸದಲ್ಲಿ ತೊಡಗಿದ್ದಾಗೆ ಆನೆ ಏಕಾಏಕಿ ದಾಳಿ ಸಡೆಸಿದ ಪರಿಣಾಮ ರವಿಕುಮಾರ್ ಎಂಬುವರು ಮೃತಪಟ್ಟಿದ್ದಾರೆ.

Elephant Attack Sakleshpura reason
ಕಾಡಾನೆ ದಾಳಿಗೆ ಮತ್ತೊಬ್ಬ ಕೃಷಿ ಕಾರ್ಮಿಕ ಬಲಿ

By

Published : May 10, 2022, 10:48 PM IST

ಸಕಲೇಶಪುರ(ಹಾಸನ):ಕೂಲಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಕಬ್ಬಿನಗದ್ದೆ ಗ್ರಾಮದ ರವಿಕುಮಾರ್ (48) ಆನೆ ತುಳಿತಕ್ಕೆ ಒಳಗಾಗಿ ಸಾವಿಗೀಡಾದ ಕಾಫಿ ತೋಟದ ಕೂಲಿ ಕಾರ್ಮಿಕ. ಮಂಗಳವಾರ ಬೆಳಗ್ಗೆ ಬಾಳ್ಳುಪೇಟೆಯ ಬಿ.ಡಿ.ವಿಶ್ವನಾಥ್ ಅವರ ಕಬ್ಬಿನಗದ್ದೆ ಗ್ರಾಮದಲ್ಲಿರುವ ಕೆಲಸಕ್ಕೆ ಹೋಗಿದ್ದರು. ಕಾಫಿ ಗಿಡಗಳ ಮಧ್ಯೆ ಇದ್ದ ಕಾಡಾನೆಗಳು, ಏಕಾಏಕಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಲ್ಲಿಂದ ಪಾರಾಗಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ.

ಸಕಲೇಶಪುರ ಭಾಗದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಶಾಸಕ ಹೆಚ್.ಕೆ. ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಮಿಯಾನ ಹಾಕಿ ನಿರಂತರವಾಗಿ ಪ್ರತಿಭಟನೆ ಮಾಡಿದ್ದರು. ಕಾಫಿ ಬೆಳೆಗಾರರ ಸಮಾವೇಶದಲ್ಲಿ ಬೆಳೆಗಾರರ ಹಲವು ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಶಾಶ್ವತ ಪರಿಹಾರ ದೊರಕಿಸಿ ಕೊಡುತ್ತೇವೆ ಅಂತ ಕಂದಾಯ ಸಚಿವ ಆರ್. ಅಶೋಕ್ ಕೂಡ ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿದ ವಾರದಲ್ಲಿಯೇ ಈಗ ಆನೆದಾಳಿಗೆ ಮತ್ತೊಂದು ಜೀವ ಬಲಿಯಾಗಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ಬಸವರಾಜ್ ಸೇರಿದಂತೆ, ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಕಾರ್ಯ ಮಾಡಿದ್ದಾರೆ ಹೊರತು ಆನೆಗಳ ಸ್ಥಳಾಂತರಕ್ಕೆ ಶಾಶ್ವತ ಪರಿಹಾರವನ್ನು ಯಾವ ಸರ್ಕಾರವಾಗಲಿ ಅಥವಾ ಸರ್ಕಾರದ ಅಧಿಕಾರಿಗಳಾಗಲಿ ಮಾಡದಿರುವುದು ರೈತರ ಜೀವಕ್ಕೆ ಕುತ್ತು ತರುತ್ತಿದೆ.

ಇದನ್ನೂ ಓದಿ:ವಿದ್ಯುತ್ ಸ್ಪರ್ಶಿಸಿ ಜೂನಿಯರ್ ರವಿಚಂದ್ರನ್ ಸಾವು..

ABOUT THE AUTHOR

...view details