ಹಾಸನ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳೂ ವೈದ್ಯಕಿಯ ಶಿಕ್ಷಣ ಇಲಾಖೆಯ ನೌಕರರಿಗೂ ಸಿಗುವಂತಾಗಬೇಕು ಎಂದು ಒತ್ತಾಯಿಸಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಖಾಯಂ ಶುಶ್ರೂಷಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಹಿಮ್ಸ್ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಾಯಿತು.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಪ್ರತಿಭಟನೆ - ಹಾಸನ ಪ್ರತಿಭಟನೆ ಸುದ್ದಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳು ತಮಗೂ ಸಿಗುವಂತಾಗಬೇಕು ಎಂದು ಒತ್ತಾಯಿಸಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಖಾಯಂ ಶುಶ್ರೂಷಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಹಿಮ್ಸ್ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವೈದ್ಯಕಿಯ ಶಿಕ್ಷಣ ಇಲಾಖೆಯ ನೌಕರರ ಪ್ರತಿಭಟನೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರಿಗೆ ಸಿಗುವ ಎನ್ಪಿಎಸ್, ಕೆಜೆಐಡಿ, ಜ್ಯೋತಿ ಸಂಜೀವಿನಿ ಸೇರಿದಂತೆ ಯಾವ ಸೌಲಭ್ಯವೂ ವೈದ್ಯಕೀಯ ಶಿಕ್ಷಣ ಇಲಾಖೆಯವರಿಗೆ ದೊರಕುತ್ತಿಲ್ಲ. ಇಲ್ಲಿ ಎಷ್ಟೇ ವರ್ಷ ಸೇವೆ ಸಲ್ಲಿಸಿದರೂ ಸಹ ಯಾವ ಪ್ರಮೋಷನ್ ಕೊಡುವುದಿಲ್ಲ. ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳು ನಮಗೂ ಸಿಗುವಂತಾಗಬೇಕು ಎಂದು ಒತ್ತಾಯಿಸಿದರು.
ನಾವು ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನಮ್ಮ ಕರ್ತವ್ಯ ನಿರ್ವಹಿಸಿ ಬೇಡಿಕೆ ಈಡೇರಿಕೆಗೆ ಪ್ರತಿಭಟಿಸುತ್ತಿದ್ದೇವೆ ಎಂದರು.