ಹಾಸನ : ಸಾಲ ತೀರಿಸಲು ಸಾಧ್ಯವಾಗದೇ ರೈತನೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಅರಕಲಗೂಡು ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲ ತೀರಿಸಲಾಗದೇ ವಿಷ ಸೇವಿಸಿ ರೈತ ಆತ್ಮಹತ್ಯೆ - kannadanews
ಸಾಲದ ಶೂಲಕ್ಕೆ ಮತ್ತೊಬ್ಬ ರೈತ ಬಲಿಯಾಗಿರುವ ಘಟನೆ ಹಾಸನ ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆಯಿಂದ ರೈತ ಸಾವು
ಕಳ್ಳಿಮುದ್ದನಹಳ್ಳಿ ಗ್ರಾಮದ ನಿವಾಸಿ ಹನುಮಂತೇಗೌಡ (55) ಮೃತ ರೈತ. ಇವರು ಬೈಚನಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕೈ ಸಾಲ ಸೇರಿದಂತೆ 9 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಕೊಳವೆ ಬಾವಿ ನೀರು ಭತ್ತಿ ಹೋಗಿತ್ತು. ಇದರಿಂದ ಮನನೊಂದು ಜುಲೈ 23 ರಂದು ವಿಷ ಸೇವಿಸಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನದ ಎಸ್‌ಎಸ್ಎಂ ಆಸ್ಪತ್ರೆಗೆ ದಾಖಲಿಸಿ ನಂತರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಮೃತ ಪಟ್ಟಿದ್ದಾರೆ. ಈ ಸಂಬಂಧ ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Aug 13, 2019, 7:52 PM IST