ಸಕಲೇಶಪುರ: ಸಾಲಬಾಧೆಯಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕ್ಯಾನಹಳ್ಳಿಯಲ್ಲಿ ನಡೆದಿದೆ.
ಬೆಳೆದ ಬೆಳೆಗೆ ಸರಿಯಾದ ಬೆಲೆ ಬರಲಿಲ್ಲವೆಂದು ಆತ್ಮಹತ್ಯೆ ಮಾಡಿಕಕೊಂಡ ರೈತ - ಹಾಸನ ಜಿಲ್ಲೆಯ ಸಕಲೇಶಪುರ
ಸಕಲೇಶಪುರ ತಾಲೂಕಿನಲ್ಲಿ ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಹಾಗೂ ಬೀನ್ಸ್ ಬೆಳೆ ಬೆಳೆದಿದ್ದ ರೈತನೊಬ್ಬ ಲಾಭ ಬರಲಿಲ್ಲ ಎಂಬ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
![ಬೆಳೆದ ಬೆಳೆಗೆ ಸರಿಯಾದ ಬೆಲೆ ಬರಲಿಲ್ಲವೆಂದು ಆತ್ಮಹತ್ಯೆ ಮಾಡಿಕಕೊಂಡ ರೈತ dsddd](https://etvbharatimages.akamaized.net/etvbharat/prod-images/768-512-7408940-thumbnail-3x2-vi.jpg)
ಸಕಲೇಶಪುರ:ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಕೆ.ಬಿ. ಜೈರಾಜ್ (65) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 1 ಲಕ್ಷ ರೂ. ಹಾಗೂ 3 ಲಕ್ಷ ರೂ.ಗೂ ಅಧಿಕ ಕೈಸಾಲ ಮಾಡಿಕೊಂಡಿದ್ದರು. ಒಂದು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಹಾಗೂ ಬೀನ್ಸ್ ಬೆಳೆದು ಸರಿಯಾದ ಲಾಭ ದೊರಕದೇ ನಷ್ಟ ಅನುಭವಿಸಿದ್ದರು ಎಂದು ಹೇಳಲಾಗುತ್ತಿದೆ.
ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated : May 30, 2020, 5:10 PM IST