ಹಾಸನ: ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಡಾನೆಗಳು ಏಕಾಏಕಿ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರಾಗಿದ್ದಾರೆ.
ಕಾಡಾನೆ ದಾಳಿ.. ಕೂದಲೆಳೆ ಅಂತರದಲ್ಲಿ ಪಾರಾದ ರೈತ.. - ಅರಣ್ಯ ಇಲಾಖೆ
ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಡಾನೆಗಳು ಏಕಾಏಕಿ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರಾಗಿದ್ದಾರೆ.
ಕಾಡಾನೆ
ಜಿಲ್ಲೆಯ ಸಕಲೇಶಪುರ ತಾಲೂಕಿನ ಕೌಡಳ್ಳಿ ಗ್ರಾಮದ ಸುಬ್ರಮಣ್ಯ (50) ಕಾಡಾನೆಯಿಂದ ಪಾರಾದ ರೈತ. ಪ್ರತಿನಿತ್ಯದಂತೆ ಇಂದು ಕೂಡಾ ಕಾಫಿತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ, 3 ಕಾಡಾನೆಗಳು ಸುಬ್ರಹ್ಮಣ್ಯರವರ ಮೇಲೆ ದಾಳಿ ಮಾಡಲು ಮುಂದಾಗಿವೆ. ಈ ವೇಳೆ ಸುಬ್ರಮಣ್ಯ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿದ್ದು, ಕಾಡಾನೆಯನ್ನ ಓಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.