ಚನ್ನರಾಯಪಟ್ಟಣ: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಚನ್ನರಾಯಪಟ್ಟಣದ ರೈತ ಮುಖಂಡರು ಬೆಂಗಳೂರು-ಮಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಸ್ತೆ ತಡೆ - farmers in protest
ಚನ್ನರಾಯಪಟ್ಟಣದ ರೈತ ಮುಖಂಡರು ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಇಂದು ಬೆಂಗಳೂರು-ಮಂಗಳೂರು ಹೆದ್ದಾರಿಯನ್ನು 2 ಗಂಟೆಗಳ ಕಾಲ ತಡೆದು ಪ್ರತಿಭಟನೆ ನಡೆಸಿದರು.

ರೈತರಿಂದ ಬೆಂಗಳೂರು-ಮಂಗಳೂರು ಹೆದ್ದಾರಿ ತಡೆ
ರೈತರಿಂದ ಬೆಂಗಳೂರು-ಮಂಗಳೂರು ಹೆದ್ದಾರಿ ತಡೆ
ಬಿರು ಬಿಸಿಲನ್ನು ಲೆಕ್ಕಿಸದೇ ರಸ್ತೆ ಮಧ್ಯೆ ಕುಳಿತ ರೈತರು ಹಾಗೂ ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಅವರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ನಡೆಸಿದ್ದರಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು.
ಸುಮಾರು 2 ಗಂಟೆಗಳ ಕಾಲ ರಸ್ತೆ ತಡೆ ನಡೆಸಲಾಯಿತು. ನಂತರ ಸ್ಥಳಕ್ಕೆ ಹಾಸನ ಎಸ್ಪಿ ಶ್ರೀನಿವಾಸಗೌಡ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು.