ಹಾಸನ: ಸಹಕಾರ ಬ್ಯಾಂಕ್, ಪಿಎಲ್ಡಿ ಬ್ಯಾಂಕ್ಗಳಲ್ಲಿ ಕೃಷಿ ಉಪಕರಣ, ಟ್ರಾಕ್ಟರ್, ಟಿಲ್ಲರ್ ಖರೀದಿಗೆ ರೈತರು ಮಾಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿಯ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿಯನ್ನು ಮನ್ನಾ ಮಾಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಹಳೇಬೀಡು ಬಳಿ ಆಯೋಜಿಸಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಮಾಯಗೊಂಡನ ಹಳ್ಳಿ ಹೆಲಿಪ್ಯಾಡ್ನಲ್ಲಿ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು.
ನಮ್ಮದು ರೈತ ಪರ ಸರ್ಕಾರ, ರಾಜ್ಯದಲ್ಲಿ ಕೃಷಿಕರು ಸಂಕಷ್ಟದಲ್ಲಿದ್ದಾರೆ, ಅವರ ಹಿತಕಾಯುವ ಉದ್ದೇಶದಿಂದ 500 ಕೋಟಿ ರೂ ಬಡ್ಡಿ, ಸುಸ್ತಿ ಬಡ್ಡಿಯನ್ನು ಮನ್ನಾ ಮಾಡಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲೇ ಇಂತಹ ಕ್ರಮ ಕೈಗೊಂಡಿರುವುದು ಇದೇ ಮೊದಲು ಎಂದರು.
ರೈತರ ಸಾಲದ ಮೇಲಿನ ಬಡ್ಡಿ ಮನ್ನಾ: ಬಿಎಸ್ವೈ ಘೋಷಣೆ ಜಲಾಶಗಳಿಂದ ನೀರನ್ನು ತೆಗೆದು ಕೆರೆಗಳನ್ನು ತುಂಬಿಸುವ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು. ಈಗಾಗಲೇ ಭತ್ತಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿ ರೈತರ ನೆರವಿಗೆ ಬರಲಾಗಿದೆ. ಮಂದಿನ ಬಜೆಟ್ನಲ್ಲಿಯೂ ಕೃಷಿಕರಿಗೆ ಅನಕೂಲವಾಗುವ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕರಾದ ಲಿಂಗೇಶ್, ಪ್ರೀತಂ ಜೆ ಗೌಡ ಮತ್ತಿತರರು ಹಾಜರಿದ್ದರು.