ಹಾಸನ: ಅರಕಲಗೂಡು ತಾಲೂಕಿನ ರಾಮನಾಥ-ಮೈಸೂರು ಮಾರ್ಗವು ಹದಗೆಟ್ಟಿದ್ದು, ಜಿಲ್ಲಾಡಳಿತ ಕೂಡಲೇ ರಸ್ತೆ ದುರಸ್ತಿಕಾರ್ಯ ಕೈಗೊಳ್ಳಬೇಕು ಎಂದು ವಿವಿಧ ರೈತ ಸಂಘಟನೆಗಳು, ಸಾರ್ವಜನಿಕರು ರಸ್ತೆ ತಡೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.
ಬಸವಾಪಟ್ಟಣದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ರಸ್ತೆಯಲ್ಲಿಯೇ ಅಡುಗೆ ತಯಾರಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿ ಬೆಂಬಲ ಸೂಚಿಸಿದರು. ಹಿಂದಿನ ಮೈತ್ರಿ ಸರ್ಕಾರ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿದರು.