ಹಾಸನ: ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ತಂದೆ ಹಾಗು ಮಗ ದುರ್ಮರಣಕ್ಕೀಡಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಕೂಡಿಗೆ ಸಮೀಪ ನಡೆಯಿತು. ತಮಿಳುನಾಡು ಮೂಲದ ಅಂಜನಪ್ಪ (40), ಪುತ್ರ ಕಾರ್ತಿಕ್ (17) ಮೃತ ದುರ್ದೈವಿಗಳು.
ಧರ್ಮಸ್ಥಳಕ್ಕೆಂದು ಎರಡು ಕಾರಿನಲ್ಲಿ 10 ಮಂದಿ ತೆರಳುತ್ತಿದ್ದರು. ಅದರಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ.