ಕರ್ನಾಟಕ

karnataka

ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು: ಲೋಹಿತ್ ಕೌಡಹಳ್ಳಿ

By

Published : Jul 1, 2020, 7:38 PM IST

ಸಕಲೇಶಪುರದ ಟಿ.ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಲೋಹಿತ್ ಕೌಡಹಳ್ಳಿ ಮಾತನಾಡಿ ಆಯಾ ಭಾಗಗಳಲ್ಲಿ ಸಹಕಾರಿ ಸಂಘಗಳು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಸನ್ಮಾನ ಮಾಡಲು ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ 7 ಜನ ಆಶಾ ಕಾರ್ಯಕರ್ತೆಯರಿಗೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಿ ಪ್ರೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಗುತ್ತಿದೆ ಎಂದರು.

Sakleshpur
ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ

ಸಕಲೇಶಪುರ: ಕೋವಿಡ್-19 ಸಂದರ್ಭದಲ್ಲಿ ಜನರಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು ಎಂದು ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಲೋಹಿತ್ ಕೌಡಹಳ್ಳಿ ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ

ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದ ನಂತರ ಮಾತನಾಡಿ ಆಯಾ ಭಾಗಗಳಲ್ಲಿ ಸಹಕಾರಿ ಸಂಘಗಳು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಸನ್ಮಾನ ಮಾಡಲು ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ 7 ಜನ ಆಶಾ ಕಾರ್ಯಕರ್ತೆಯರಿಗೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಿ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಗಿದೆ. ತಮ್ಮ ಆರೋಗ್ಯವನ್ನು ಮರೆತು ಪ್ರತಿ ಮನೆ ಮನೆಗಳಿಗೆ ಹೋಗಿ ಮಾಹಿತಿ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆ ಅತ್ಯಂತ ಶ್ಲಾಘನೀಯವಾದದ್ದು ಎಂದರು.

ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ಉಪಾಧ್ಯಕ್ಷೆ ವಜ್ರ ಲೋಕೇಶ್, ಸದಸ್ಯರುಗಳಾದ ಶಶಿಕುಮಾರ್, ಫೈರೋಜ್, ಹಲಸುಲಿಗೆ ರಮೇಶ್, ಶಿವಪ್ಪ ನಾಯಕ್​ ಹಾಗೂ ಕಾರ್ಯದರ್ಶಿ ಲೋಕೇಶ್, ಸೋಮಣ್ಣ ಸೇರಿದಂತೆ ಇತರರು ಹಾಜರಿದ್ದರು.

ABOUT THE AUTHOR

...view details