ಹಾಸನ:ಸಾವಿರಾರು ಭಕ್ತರು ಅತ್ಯಂತ ಕಾತುರದಿಂದ ಕಾಯುತ್ತಿರುವ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದ್ದು, ದೇವಿಯ ಒಡವೆಗಳನ್ನು ದೇವಾಲಯದೊಳಗೆ ಪೂಜಾ ವಿಧಿವಿಧಾನಗಳ ಮೂಲಕ ಕೊಂಡೊಯ್ಯಲಾಯಿತು.
ಇತಿಹಾಸ ಪ್ರಸಿದ್ಧ ಹಾಸನಾಂಬೆ ದರ್ಶನ ಭಾಗ್ಯಕ್ಕೆ ಕ್ಷಣಗಣನೆ - ಹಾಸನ ದೇವಾಲಯ
ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದ್ದು, ದೇವಾಲಯ ತೆರೆದ ತಕ್ಷಣವೇ ಪೂಜಾ ಕೈಂಕರ್ಯಗಳು ನೆರವೇರಲಿವೆ. ಭಕ್ತರಿಗೆ ದೇವಿಯ ದರ್ಶನ ಭಾಗ್ಯವೂ ಸಿಗಲಿದೆ.
ಹಾಸನಾಂಬೆ ದೇವಾಲಯವನ್ನು ವಿವಿಧ ಹೂವುಗಳಿಂದ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಶ್ವಯುಜ ಮಾಸದ ಪೌರ್ಣಮಿಯ ನಂತರ ಬರುವ ಗುರುವಾರದಂದು ದೇಗುಲದ ಬಾಗಿಲು ತೆರೆದು ದೇವಿಯ ದರ್ಶನಕ್ಕೆ 11 ದಿನಗಳ ಕಾಲ ಅವಕಾಶವಿರುತ್ತದೆ.
ಪ್ರತೀ ವರ್ಷದಂತೆ ಈ ಬಾರಿಯೂ ಗುರುವಾರ ಮಧ್ಯಾಹ್ನ 12.30 ಕ್ಕೆ ದೇಗುಲದ ಬಾಗಿಲು ತೆರೆಯುವ ಹಿನ್ನೆಲೆ ಜಿಲ್ಲಾಧಿಕಾರಿ ಆರ್. ಗಿರೀಶ್, ದೇಗುಲ ಆಡಳಿತಾಧಿಕಾರಿ ಡಾ. ನಾಗರಾಜ್, ನೂತನ ಎ.ಸಿ ನವೀನ್ ಭಟ್, ತಹಶೀಲ್ದಾರ್ ಮೇಘನಾ ಸೇರಿದಂತೆ ಹಲವು ಅಧಿಕಾರಿಗಳು ಅಂತಿಮ ಹಂತದ ಸಿದ್ಧತಾಕಾರ್ಯದಲ್ಲಿ ನಿರತರಾಗಿದ್ದಾರೆ.