ಕರ್ನಾಟಕ

karnataka

ETV Bharat / state

ಹಾಸನ : ಒಂದೇ ಪಕ್ಷದ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ

ಪಕ್ಷದ ಕಾರ್ಯಕರ್ತರ ಸಭೆ ವೇಳೆ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

Etv Bharat
Etv Bharat

By ETV Bharat Karnataka Team

Published : Dec 9, 2023, 4:12 PM IST

ಹಾಸನ : ಒಂದೇ ಪಕ್ಷದ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ

ಬೇಲೂರು (ಹಾಸನ): ಕಾರ್ಯಕರ್ತರ ಸಭೆಯಲ್ಲಿ ಒಂದೇ ಪಕ್ಷದ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಪಕ್ಷದ ಎರಡು ನಾಯಕರ ಬೆಂಬಲಿಗರು ಮಾತಿ ಚಕಮಕಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಕುರ್ಚಿಗಳಿಂದ ಬಡೆದಾಡಿಕೊಂಡಿದ್ದಾರೆ.

ಇಂದು ಮಾಜಿ ಸಚಿವ ಬಿ ಶಿವರಾಂ ಅವರು ಬೇಲೂರು ತಾಲೂಕಿನ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದರು. ಸಭೆಯಲ್ಲಿ ಪಕ್ಷದ ಹಲವು ಸ್ಥಳೀಯ ನಾಯಕರು ಪಾಲ್ಗೊಂಡಿದ್ದರು. ಈ ಸಭೆಗೆ ಟಿಕೆಟ್ ಆಕಾಂಕ್ಷಿ ಜತ್ತೇನಹಳ್ಳಿ ರಾಮಚಂದ್ರ, ಜೊತೆಗೆ ಸ್ಥಳೀಯ ಮುಖಂಡ ಹಾಗೂ ಕಳೆದ ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಗ್ರಾನೈಟ್ ರಾಜಶೇಖರ್ ಆಗಮಿಸಿದ್ದರು.

ರಾಜಶೇಖರ್ ಸಭೆಗೆ ಬಂದ ವೇಳೆ ಮಾಜಿ ಸಚಿವ ಬಿ ಶಿವರಾಂ ಮಾತನಾಡುತ್ತಿದ್ದರು. ನಮ್ಮ ಕಾರ್ಯಕರ್ತರು, ಮುಖಂಡರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಬೇಲೂರಿನಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದು ಬಿ ಶಿವರಾಂ ಹೇಳಿದರು. ಈ ವೇಳೆ ಬಿ ಶಿವರಾಂ ಮತ್ತು ಲೋಕಸಭಾ ಟಿಕೆಟ್​ ಆಕಾಂಕ್ಷಿಯಾಗಿರುವ ಗ್ರಾನೈಟ್ ರಾಜಶೇಖರ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೆರಳಿದ ರಾಜಶೇಖರ್ ಬೆಂಬಲಿಗರು, ಶಿವರಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಬಿ ಶಿವರಾಂ ಹಾಗೂ ರಾಜಶೇಖರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ.

ಉಭಯ ಬಣಗಳ ಕಾರ್ಯಕರ್ತರ ನಡುವಣ ವಾಗ್ವಾದ ವಿಕೋಪಕ್ಕೆ ತಿರುಗಿ ಇಬ್ಬರ ಬೆಂಬಲಿಗರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಜೊತೆಗೆ ಬೆಂಬಲಿಗರು ಕುರ್ಚಿಗಳನ್ನು ಹಿಡಿದು ಬಡೆದಾಡಿಕೊಂದ್ದಾರೆ. ಗಲಾಟೆಯಿಂದ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗಲಾಟೆ ಜೋರಾಗುತ್ತಿದ್ದಂತೆ ನಾಯಕರು ಸಭೆಯಿಂದ ಕಾಲ್ಕಿತ್ತಿದ್ದಾರೆ. ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ :ಜೆಡಿಎಸ್​ನಿಂದ ಸಿ ಕೆ ನಾಣು, ಸಿಎಂ ಇಬ್ರಾಹಿಂ ಉಚ್ಛಾಟನೆ; ಕಾರ್ಯಕಾರಣಿ ಸಭೆಯಲ್ಲಿ ನಿರ್ಣಯ

ABOUT THE AUTHOR

...view details