ಹಾಸನ:ಆಕಸ್ಮಿಕ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಕೊಬ್ಬರಿ ತುಂಬಿದ್ದ ಗೋದಾಮು ಸುಟ್ಟು ಕರಕಲಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಚೋಳೇನಹಳ್ಳಿ ಗ್ರಾಮದ ಶಾಸಕ ಸಿಎನ್ ಬಾಲಕೃಷ್ಣ ಅವರ ಸಹೋದರ ಸಿಎಂ ಪುಟ್ಟಸ್ವಾಮಿಗೌಡ ಅವರಿಗೆ ಸೇರಿದ ಕೊಬ್ಬರಿ ಗೋಧಾಮಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ಬೆಂಕಿಗೆ ಆಹುತಿಯಾಗಿದೆ.
ತಕ್ಷಣ ಅಗ್ನಿಶಾಮಕ ತಂಡದ ಸಿಬ್ಬಂದಿ ಆಗಮಿಸಿ ಬೆಂಕಿಯ ಬೆಂಕಿಯನ್ನು ನಂದಿಸಿದರು. ಈ ಅವಘಡದಲ್ಲಿ ಕೊಬ್ಬರಿ ಗೋದಾಮು ಸೇರಿದಂತೆ ಮನೆಯು ಸುಟ್ಟು ಕರಕಲಾಗಿದೆ. ಈ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಶಾಸಕ ಸಿಎನ್ ಬಾಲಕೃಷ್ಣ ಭೇಟಿ ನೀಡಿದ್ದು, ಸಹೋದರನಿಂದ ಮಾಹಿತಿ ಪಡೆದರು. ಇನ್ನು, ಈ ಘಟನೆ ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವೃಂದಾವನ ಹೋಟೆಲ್ನಲ್ಲಿ ಅಗ್ನಿ ಅವಘಡ.. ಇಬ್ಬರು ಸಿಬ್ಬಂದಿ ಮಲಗಿದ್ದಲ್ಲೇ ಸಜೀವದಹನ