ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಮೂಲ ಕಾರಣ ಸಿದ್ಧರಾಮಯ್ಯ: ಹೆಚ್‌ಡಿಕೆ

2009ರಲ್ಲಿ ಆಪರೇಷನ್ ಕಮಲದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯನ್ನು ಮುಗಿಸಲು ಬಿಜೆಪಿ ಅಭ್ಯರ್ಥಿಯಿಂದ ಎಷ್ಟು ಹಣ ಸಂದಾಯ ಮಾಡಿಸಿಕೊಂಡರು ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನವರನ್ನು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

By

Published : Apr 20, 2022, 3:49 PM IST

ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪಕ್ಷದವರೇ ಡಿ.ಜೆ.ಹಳ್ಳಿ ತರಹ ಹುಬ್ಬಳ್ಳಿಯಲ್ಲಿ ಬೆಂಕಿ ಹಚ್ಚಿದರು. ಕಾಂಗ್ರೆಸ್ಸನ್ನು ಇಡೀ ದೇಶದಲ್ಲಿ ಜನರು ತಿರಸ್ಕಾರ ಮಾಡಿ ಆಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಿದ್ದರಾಮಯ್ಯ ಕಾರಣ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


'2009ರಲ್ಲಿ ಆಪರೇಷನ್ ಕಮಲದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಗಿಸಲು ಬಿಜೆಪಿ ಅಭ್ಯರ್ಥಿಯಿಂದ ಎಷ್ಟು ಹಣ ಸಂದಾಯ ಮಾಡಿಸಿಕೊಂಡರು? ಎಂದು ನಾನು ಸುಳ್ಳಿನರಾಮಯ್ಯನ ಕೇಳ್ತಿನಿ. ಕಳೆದ ಹತ್ತು ವರ್ಷದಲ್ಲಿ ಐವತ್ತು ಬಾರಿ ಈ ಪ್ರಶ್ನೆ ಕೇಳಿದ್ದೀನಿ, ಇನ್ನೂ ಉತ್ತರ ಕೊಟ್ಟಿಲ್ಲ. ಕಲ್ಲಪ್ಪ ಹಂಡಿಬಾಗ್ ಬಗ್ಗೆ ಯಾಕೆ ಮಾತನಾಡಲ್ಲ. ಸಿದ್ದರಾಮಯ್ಯನ ಆಡಳಿತದಿಂದ ಕಲ್ಲಪ್ಪ ಹಂಡಿಬಾಗ್ ಸತ್ತಿದ್ದು, ಅದಕ್ಕೆ ಯಾರಿಗೆ ಶಿಕ್ಷೆ ಕೊಟ್ಟರು ಹೇಳಲಿ' ಎಂದು ಪ್ರಶ್ನಿಸಿದರು.

'ಅರ್ಕಾವತಿ ಕರ್ಮಕಾಂಡ, ನೂರಾರು ಕೋಟಿ ತಿಂದು ತೇಗಿದರು. ಅದಕ್ಕೆ ಉತ್ತರ ಕೊಟ್ಟಿದ್ದೀರಾ?. ಅಷ್ಟೇ ಅಲ್ಲದೆ ದೇವೇಗೌಡರ ಮೇಲೆ ಆಣೆ ಮಾಡು ಅಂತ ಹೇಳಲು ನೀನು ಯಾವ ಊರ ದಾಸಯ್ಯ?. ಎಚ್ಚರಿಕೆಯಿಂದ ಮತನಾಡಲಿ. ಪದೇ ಪದೇ ಜೆಡಿಎಸ್​ ಬಿಜೆಪಿಯ ಬಿ-ಟೀಂ ಅಂತ ಹೇಳುತ್ತಿದ್ದೀರಿ. ಯಾರಿಂದ ಈ ಸರ್ಕಾರ ನಡೀತಿರೋದು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಮೂಲ ಕಾರಣ ಸಿದ್ದರಾಮಯ್ಯ' ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ:50 ಕೋಟಿ ರೂ. ಮೇಲ್ಪಟ್ಟ ಕಾಮಗಾರಿಗಳ ಅನುಮೋದನೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸಮಿತಿ ರಚನೆ.. ಸಿಎಂ

ABOUT THE AUTHOR

...view details