ಹಾಸನ: ಇಂದು ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಎ.ಮಂಜು ಸ್ವಗ್ರಾಮ ಹನ್ಯಾಳುವಿನಲ್ಲಿ ಪತ್ನಿ ತಾರಾ ಜೊತೆ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಪಕ್ಷದ ಉಳಿವಿಗಾಗಿ ಅವರು ಯಾರ ಜೊತೆ ಬೇಕಾದರೂ ಹೋಗುತ್ತಾರೆ. ನಮಗೆ ಮೆಜಾರಿಟಿ ಇರುವುದರಿಂದ ಯಾರ ಅವಶ್ಯಕತೆ ಇಲ್ಲ ಎಂದರು.