ಹಾಸನ:ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದು ಕಾಮಗಾರಿ ತಡೆ ಹಿಡಿಯುವ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವ್ಯಂಗ್ಯವಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕಾವೇರಿ ನಿಗಮ ವ್ಯಾಪ್ತಿಯ 5 ಸಾವಿರ ಕೋಟಿ ರೂ ವೆಚ್ಚದ ಕಾಮಗಾರಿಯನ್ನು ತಡೆ ಹಿಡಿದಿದ್ದಾರೆ. ಈ ಭಾಗದಲ್ಲಿ ಮತ ಹಾಕಿಲ್ಲ ಎಂಬ ಕಾರಣಕ್ಕೆ ಕಾಮಗಾರಿಗೆ ಸರ್ಕಾರ ತಡೆ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆ.ಆರ್. ಪೇಟೆಯಲ್ಲಿ ಅವರದೇ ಪಕ್ಷದ ಶಾಸಕರು ಗೆದ್ದಿದ್ದಾರೆ. ಆದ್ರೂ ಕಾವೇರಿ ಜಲಾನಯನ ಪ್ರದೇಶದ ಕಾಮಗಾರಿಯನ್ನು ತಡೆ ಹಿಡಿಯಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿನ ಕಾಮಗಾರಿಯನ್ನು ತಡೆ ಹಿಡಿದಿದ್ದಾರೆ. ದ್ವೇಷದ ರಾಜಕಾರಣ ಮಾಡಿದರೆ ಮುಂದೆ ಅನುಭವಿಸುವ ಕಾಲವೂ ಬರುತ್ತದೆ ಎಂದು ಸಿಎಂ ಬಿಎಸ್ವೈ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೀರಾವರಿ ಯೋಜನೆಗಳಿಗೆ ಸಂಬಂಧಪಟ್ಟ ಫೈನಲ್ ಹಂತದ ಕಾಮಗಾರಿ ಹಾಗೂ ಹಾಸನಕ್ಕೆ ಮಂಜೂರಾದ ತೋಟಗಾರಿಕಾ ಇಲಾಖೆ ಕಾಲೇಜನ್ನು ತಡೆ ಹಿಡಿದಿದ್ದಾರೆ ಎಂದು ದೂರಿದರು. ಅದೇ ರೀತಿ ಬೇರೆ ಇಲಾಖೆಗಳಲ್ಲಿನ ಕಾಮಗಾರಿಯನ್ನು ತಡೆ ಹಿಡಿದಿದ್ದು, ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ರೇವಣ್ಣ ಆಗ್ರಹಿಸಿದರು.
ಕಳೆದ ಬಾರಿ ವಿಧಾನಸಭೆಯಲ್ಲಿ ಸ್ಪೀಕರ್ ಪ್ರಶ್ನೋತ್ತರವನ್ನು ತಡೆ ಹಿಡಿದಿದ್ದಾರೆ. ಸದಸ್ಯರು ಪ್ರಶ್ನೆ ಮಾಡುವುದಿದ್ದರೇ ಅವಕಾಶ ಕೊಡಬೇಕು. ಬಿಜೆಪಿ ಸರ್ಕಾರ ಬಂದ ಮೇಲೆ ಪ್ರಶ್ನೆ ಮಾಡುವ ಹಕ್ಕನ್ನು ಕಡಿತಗೊಳಿಸಲು ಮುಂದಾಗಿದ್ದಾರೆ ಎಂದರು. ಶಾಸಕರ ಹಕ್ಕು ಕಿತ್ತುಕೊಂಡರೆ ಸದನದ ಒಳಗೆ ಹೊರಗೆ ಹೋರಾಟ ಮಾಡುವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.