ಹಾಸನ:ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ 'ಕುದುರೆ ವ್ಯಾಪಾರ'ದಲ್ಲಿ ತೊಡಗಲು ಪ್ರಯತ್ನಿಸಿದ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ. ಹಾಗೆಯೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಮೇಲೆಯೂ ಕ್ರಮ ಕೈಗೊಳ್ಳಬೇಕಲ್ಲವೇ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಈ ರೀತಿ ಉತ್ತರಾಖಂಡ್ ಮಾಜಿ ಸಿಎಂ ವಿರುದ್ಧ ಕ್ರಮ ಜರುಗಿಸಿದೆ. ಹಾಗೆಯೇ ರಾಜ್ಯದಲ್ಲೂ ಮುಖ್ಯಮಂತ್ರಿ ಬಿಎಸ್ವೈ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಲ್ಲ. ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ ಎಂದು ಪ್ರಶ್ನಿಸಿದರು. ಅಲ್ಲದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನ ಕಾದು ನೋಡೋಣ ಎಂದರು.