ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಗರ್ಭಿಣಿ ಸೇರಿ ಒಂದೇ ಕುಟುಂಬದ ನಾಲ್ವರು ಬಲಿ! - ಅಪಘಾತಕ್ಕೆ ಗರ್ಭಿಣಿ ಸೇರಿ ಒಂದೇ ಕುಟುಂಬದ ನಾಲ್ವರು ಬಲಿ

ಹಾಸನದ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಹೋಬಳಿಯ ಕಾರೆಹಳ್ಳಿ ಹೊರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

acvcident
ರಸ್ತೆ ಅಪಘಾತ

By

Published : Feb 26, 2023, 1:41 PM IST

ಹಾಸನ: ನಿಂತಿದ್ದ ಟ್ರ್ಯಾಕ್ಟರ್​ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಲೋಕೇಶ್​ ಆಚಾರಿ, ಪತ್ನಿ ಲಕ್ಷ್ಮಿ, ಮಕ್ಕಳಾದ ಲೇಖನ ಮತ್ತು ಗಾನವಿ ಎಂದು ಗುರುತಿಸಲಾಗಿದೆ. ಅತಿ ವೇಗ ಮತ್ತು ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದ ಸವಾರ, ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಅಸುನೀಗಿದರು.

ಚನ್ನರಾಯಪಟ್ಟಣ ತಾಲೂಕಿನ ನವಿಲೇ ಗೇಟ್ ಗ್ರಾಮದ ಲೋಕೇಶ್ ಆಚಾರಿ 12 ವರ್ಷದ ಹಿಂದೆ ಲಕ್ಷ್ಮಿ ಎಂಬುವರನ್ನು ಮದುವೆಯಾಗಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಈ ಕಾರಣಕ್ಕೆ ತನ್ನ ತಂಗಿಯ ಇಬ್ಬರು ಹೆಣ್ಣು ಮಕ್ಕಳಾದ ಗಾನವಿ ಮತ್ತು ಲೇಖನಳನ್ನು ಕರೆದುಕೊಂಡು ಬಂದು ತಾವೇ ಸಾಕುತ್ತಿದ್ದರು. ಅಕ್ಕಪಕ್ಕದ ದೇವಸ್ಥಾನಗಳನ್ನು ಸುತ್ತಿ ನೂರಾರು ಹರಕೆ ಕಟ್ಟಿಕೊಂಡ ಬಳಿಕ ಕಳೆದ ಮೂರು ತಿಂಗಳ ಹಿಂದಷ್ಟೇ ಪತ್ನಿ ಲಕ್ಷ್ಮಿ ಗರ್ಭ ಧರಿಸಿದ್ದರು. ಹಾಗಾಗಿ, ಮನೆಯಲ್ಲಿ ಸಂಭ್ರಮ ನೆಲೆಸಿತ್ತು.

ಇದನ್ನೂ ಓದಿ:ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ - ವಿಡಿಯೋ

ಅಪಘಾತಕ್ಕೂ ಮುನ್ನ ದೊಡ್ಡಮ್ಮನನ್ನು ನೋಡಬೇಕು ಅಂತ ಮಕ್ಕಳು ಕೇಳಿದ್ದಕ್ಕೆ ಇಡೀ ಕುಟುಂಬ ಸಮೇತ ಬಿ ಹೊಸೂರು ಗ್ರಾಮಕ್ಕೆ ಹೋಗಿ, ರಾತ್ರಿ ಊಟ ಮುಗಿಸಿ ಬೈಕ್​ನಲ್ಲಿ ವಾಪಸ್ ಊರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ರೂಪದ ಯಮಸ್ವರೂಪಿಗೆ ದಂಪತಿ ಸೇರಿದಂತೆ ತನ್ನ ತಂಗಿಯ ಮಕ್ಕಳು ಬಲಿಯಾಗಿದ್ದು, ಗರ್ಭದಲ್ಲಿದ್ದ ಕೂಸು ಕೂಡ ಪ್ರಾಣ ಕಳೆದುಕೊಂಡಿದೆ.

ಇದನ್ನೂ ಓದಿ:ವಿಜಯಪುರದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ: ದಂಪತಿ ಸಜೀವ ದಹನ

ಬೈಕ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನುಗ್ಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನೆ ಮಾಡಿದ್ದಾರೆ. ಯಾವುದೇ ಸೂಚನಾ ಫಲಕ ಹಾಕದೇ ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಟ್ರ್ಯಾಕ್ಟರ್ ಚಾಲಕ ಮತ್ತು ಮಾಲೀಕನ ವಿರುದ್ಧ ಮೃತರ ಸಂಬಂಧಿಕರು ನುಗ್ಗೆಹಳ್ಳಿ ಪೊಲೀಸ್ ಠಾಣೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಆಟೋಗೆ ಬೈಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ- ಸಿಸಿಟಿವಿ ದೃಶ್ಯ

ABOUT THE AUTHOR

...view details