ಶ್ರವಣಬೆಳಗೊಳ (ಹಾಸನ): ಡಿ. 27ರಂದು ಶುಕ್ರವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನ ಆಯೋಜಿಸಲಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಆರ್.ಯುವರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. 27ರಂದು ಶ್ರವಣಬೆಳಗೊಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ - ಶ್ರವಣಬೆಳಗೊಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಡಿಸೆಂಬರ್ 27ರಂದು ಶ್ರವಣಬೆಳಗೊಳದ ಹೋಬಳಿಯ ಸುಂಡಹಳ್ಳಿಯ ಸಮೀಪವಿರುವ ಬಾಹುಬಲಿ ಮಕ್ಕಳ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನ ಆಯೋಜಿಸಲಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಆರ್.ಯುವರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರವಣಬೆಳಗೊಳದ ಹೋಬಳಿಯ ಸುಂಡಹಳ್ಳಿಯ ಸಮೀಪವಿರುವ ಬಾಹುಬಲಿ ಮಕ್ಕಳ ಆಸ್ಪತ್ರೆಯಲ್ಲಿ ಶ್ರವಣಬೆಳಗೊಳ ಸಮುದಾಯ ಆರೋಗ್ಯ ಕೇಂದ್ರ, ಬಿಜಿಎಸ್ ಸಹಕಾರ ಸಂಘ, ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಚನ್ನರಾಯಪಟ್ಟಣದ ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಡಿ. 27ರಂದು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಈ ಭಾಗದ ಹೆಚ್ಚಿನ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಆರ್.ಯುವರಾಜ್ ಕೋರಿದ್ದಾರೆ.
ಇನ್ನು ಶಿಬಿರದಲ್ಲಿ ಹೃದ್ರೋಗ, ನರರೋಗ, ಮೂತ್ರಪಿಂಡ ಸಮಸ್ಯೆ, ಮಧುಮೇಹ, ಪಿತ್ತಜನಕಾಂಗ ಕಾಯಿಲೆ, ಕ್ಯಾನ್ಸರ್ ತಪಾಸಣೆ, ವೈದ್ಯಕೀಯ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಗರ್ಭಿಣಿ ಮತ್ತು ಸ್ತ್ರೀರೋಗ, ಕೀಲು ಮೂಳೆ ಸಮಸ್ಯೆ, ಕಿವಿ, ಮೂಗು, ಗಂಟಲು ತಜ್ಞರು, ಮಕ್ಕಳ ರೋಗ, ಕಣ್ಣಿನ ಸಮಸ್ಯೆ, ಚರ್ಮರೋಗ ಹಾಗೂ ಮಾನಸಿಕ ರೋಗ ತಜ್ಞರು ಸೇರಿದಂತೆ ಸುಮಾರು 60 ಜನ ತಜ್ಞ ವೈದ್ಯರು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಸಂಬಂಧಿಸಿದ ಕಾಯಿಲೆಗೆ ಉಚಿತ ಔಷಧಿ ವಿತರಣೆ ಮಾಡಲಾಗುತ್ತದೆ ಎಂದು ಯುವರಾಜ್ ತಿಳಿಸಿದರು.