ಹಾಸನ: ಕಳೆದ ಎರಡು ದಿವಸಗಳ ಹಿಂದೆ ಸಂಜೆ 5 ಗಂಟೆಯ ಸಮಯದಲ್ಲಿ ರಿಂಗ್ ರಸ್ತೆಯಲ್ಲಿರುವ ಬಾರ್ ವೊಂದರಲ್ಲಿ ಎರಡು ಗುಂಪುಗಳ ನಡುವೆ ಕುಡಿದ ಅಮಲಿನಲ್ಲಿ ಘರ್ಷಣೆ ನಡೆದಿದ್ದು, ಇವರಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಈ ಸಂಬಂಧ ಆರು ಜನ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ: ಆರು ಜನರ ಬಂಧನ - Fight between two groups in Hassan
ರಿಂಗ್ ರಸ್ತೆಯಲ್ಲಿರುವ ಬಾರ್‌ವೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ
ಪ್ರಕರಣದ ಉಳಿದ ಆರೋಪಿಗಳನ್ನು ಕೂಡ ಶೀಘ್ರದಲ್ಲಿ ಬಂಧಿಸಲಾಗುವುದು. ಈ ಕೃತ್ಯಕ್ಕೆ ಹಳೆಯ ದ್ವೇಷ, ಭಿನ್ನಾಭಿಪ್ರಾಯ ಕಾರಣವಲ್ಲ. ಎರಡೂ ತಂಡಗಳು ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.