ಸಕಲೇಶಪುರ (ಹಾಸನ):ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮಗಳು ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಶಾಸಕ ಹೆಚ್.ಕೆ. ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹಾನುಬಾಳ್ ಗ್ರಾಮದ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಡಿಜಿಟಲ್ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಇವತ್ತು ಗ್ರಾ.ಪಂ. ಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಅಧಿಕಾರ ವಿಕೇಂದ್ರೀಕರಣದಿಂದ ಕೇಂದ್ರ ಸರ್ಕಾರವೇ ಇಂದು ನೇರವಾಗಿ ಇಲ್ಲಿಗೆ ಅನುದಾನವನ್ನು ನೀಡುತ್ತಿದೆ. ಇದರಿಂದಾಗಿ ಪಂಚಾಯತಿಗಳು ಹೆಚ್ಚಿನ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ. ಹಾನುಬಾಳ್ ಗ್ರಾ.ಪಂ. ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಜೊತೆಗೆ ರೈತ ಸಂಪರ್ಕ ಕೇಂದ್ರ, ಅಂಬೇಡ್ಕರ್ ಭವನವನ್ನು ಸಹ ಉದ್ಘಾಟನೆ ಮಾಡಲಾಗಿದ್ದು, ಜೊತೆಗೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.