ಹಾಸನದಲ್ಲಿ ಕಸ ವಿಲೇವಾರಿ ಸಮಸ್ಯೆ: ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ - ಕಸ ಸಂಗ್ರಹ ಆಟೊ ಟಿಪ್ಪರ್‌ಗಳು ನಿಯಮಿತವಾಗಿ ಹೋಗುವುದಿಲ್ಲ
ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಗರಸಭೆ ಪ್ರಯತ್ನಿಸುತ್ತಿದ್ದರೆ, ಇತ್ತ ಎಲ್ಲೆಂದರಲ್ಲಿ ಬಿಸಾಡುವ ಕಸದಿಂದ ಜನರು ಪ್ರತಿದಿನ ತೊಂದರೆ ಅನುಭವಿಸಬೇಕಾಗಿದೆ.
ಹಾಸನ:ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಗರಸಭೆ ಪ್ರಯತ್ನಿಸುತ್ತಿದ್ದರೆ, ಇತ್ತ ಎಲ್ಲೆಂದರಲ್ಲಿ ಬಿಸಾಡುವ ಕಸದಿಂದ ಜನರು ಪ್ರತಿದಿನ ತೊಂದರೆ ಅನುಭವಿಸಬೇಕಾಗಿದೆ. ಖಾಲಿ ನಿವೇಶನಗಳಲ್ಲೂ ಹೆಚ್ಚಾಗಿ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಇದರಿಂದ ಸುತ್ತಮುತ್ತಲ ನಿವಾಸಿಗಳು ತೊಂದರೆ ಅನುಭವಿಸುವುದು ತಪ್ಪಿಲ್ಲ. ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಓಡಾಡಬೇಕಾಗಿದೆ. ಕಸದಿಂದಾಗಿ ಸೊಳ್ಳೆಗಳು, ಕ್ರಿಮಿಕೀಟಗಳು ಉತ್ಪತ್ತಿಯಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ದನಕರುಗಳು ಕಸದ ರಾಶಿಯಲ್ಲಿ ಸಿಗುವ ಪ್ಲಾಸ್ಟಿಕ್ ತಿಂದು ಸಾವಿಗೀಡಾಗುತ್ತಿವೆ.
TAGGED:
ನಿತ್ಯ 72 ಟನ್ ತ್ಯಾಜ್ಯ ಸಂಗ್ರಹ