ಕರ್ನಾಟಕ

karnataka

ETV Bharat / state

6 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ: ಗೋಪಾಲಸ್ವಾಮಿ ಭವಿಷ್ಯ - Gopalaswamy's outrage against BJP in hassan

ಈಗಾಗಲೇ ಯಡಿಯೂರಪ್ಪ ಅವರನ್ನು ಕೆಳಗಿಸಲು ಅವರ ಪಕ್ಷದಲ್ಲೇ ಒಂದು ಸಂಘಟನೆ ಇದೆ. ಸರ್ಕಾರ ಬೀಳಿಸಲು ಬಿಜೆಪಿಯವರೇ ಸಿದ್ಧತೆ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಹೇಳಿದ್ದಾರೆ.

gopalaswamys
ಗೋಪಾಲಸ್ವಾಮಿ

By

Published : Sep 28, 2020, 7:07 PM IST

ಹಾಸನ:ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ. ಇನ್ನು ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಭವಿಷ್ಯ ನುಡಿದಿದ್ದಾರೆ.

6 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ: ಗೋಪಾಲಸ್ವಾಮಿ ಭವಿಷ್ಯ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿದೆ. ಈ ಸರ್ಕಾರ ಬೀಳಿಸುವುದೇ ನಮ್ಮ‌ ಉದ್ದೇಶವಾಗಿದೆ. ರೈತರು ಹಾಗೂ ಕಾರ್ಮಿಕರ ವಿರೋಧ ಕಟ್ಟಿಕೊಂಡರೆ ಈ ಸರ್ಕಾರ ಉಳಿಯಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಯಡಿಯೂರಪ್ಪ ಅವರನ್ನು ಕೆಳಗಿಸಲು ಅವರ ಪಕ್ಷದಲ್ಲೇ ಒಂದು ಸಂಘಟನೆ ಇದೆ. ಸರ್ಕಾರ ಬೀಳಿಸಲು ಬಿಜೆಪಿಯವರೇ ಸಿದ್ಧತೆ ನಡೆಸುತ್ತಿದ್ದಾರೆ. ನಮ್ಮ‌ ಪಕ್ಷದಿಂದ ಬಿಜೆಪಿಗೆ ಹೋದವರಿಗೆ ಮನವಿ ಮಾಡುತ್ತೇನೆ. ಈ ಕಾಯ್ದೆ ವಿರೋಧಿಸಿ ದಯವಿಟ್ಟು ನಮ್ಮ ಪಕ್ಷಕ್ಕೆ ವಾಪಸ್ ಬನ್ನಿ. ಈ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಭವಿಷ್ಯವಿಲ್ಲ. ಇನ್ನು ಕೇವಲ ಆರು ತಿಂಗಳಲ್ಲಿ‌ಈ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ABOUT THE AUTHOR

...view details