ಹಾಸನ: ನೆರೆ ಪರಿಹಾರವಾಗಿ 300 ಕೋಟಿಯನ್ನು ತಕ್ಷಣ ಸಕಲೇಶಪುರ ತಾಲೂಕಿಗೆ ಬಿಡುಗಡೆ ಮಾಡಬೇಕೆಂದು ಶಾಸಕ ಹೆಚ್.ಕೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಪ್ರವಾಹ ಪರಿಹಾರವಾಗಿ ಸಕಲೇಶಪುರಕ್ಕೆ 300 ಕೋಟಿ ರೂ. ಬಿಡುಗಡೆಗೆ ಆಗ್ರಹ - ಶಾಸಕ ಹೆ.ಕೆ. ಕುಮಾರಸ್ವಾಮಿ
ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 500 ಕೋಟಿಗೂ ಹೆಚ್ಚು ನಷ್ಟವುಂಟಾಗಿದೆ. ಅದರಲ್ಲೂ ಸಕಲೇಶಪುರ ತಾಲೂಕಿನಲ್ಲಿ ಹೆಚ್ಚಿನ ನಷ್ಟವುಂಟಾಗಿರುವ ಹಿನ್ನೆಲೆ ಕನಿಷ್ಟ 300 ಕೋಟಿ ರೂಪಾಯಿನ್ನಾದರೂ ತಾಲೂಕಿಗೆ ಮೀಸಲಿಡಬೇಕೆಂದು ಶಾಸಕ ಹೆಚ್.ಕೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪಟ್ಟಣದ ಆಲೆಬೇಲೂರು ಗ್ರಾಮದಲ್ಲಿ ಸುಮಾರು 30 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ 1ಕಿ.ಮೀ ದೂರದ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಅವರು ಮಾತನಾಡಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಸುಮಾರು 22 ಗ್ರಾಮದ ರಸ್ತೆಗಳನ್ನು ದುರಸ್ಥಿ ಮಾಡಲು ಅನುಮೋದನೆ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಇಂದು ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ಆದಷ್ಟು ಬೇಗ ಕಾಮಗಾರಿ ಸಂಪೂರ್ಣವಾಗಲಿದೆ ಎಂದ ಭರವಸೆ ನೀಡಿದರು.
ಇನ್ನೂ ಇತ್ತೀಚೆಗಷ್ಟೆ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 500 ಕೋಟಿಗೂ ಹೆಚ್ಚು ನಷ್ಟವುಂಟಾಗಿದೆ. ಅದರಲ್ಲೂ ಸಕಲೇಶಪುರ ತಾಲೂಕಿನಲ್ಲಿ ಹೆಚ್ಚಿನ ನಷ್ಟವುಂಟಾಗಿರುವ ಹಿನ್ನೆಲೆ ಕನಿಷ್ಟ 300 ಕೋಟಿ ರೂಪಾಯಿನ್ನಾದರೂ ತಾಲೂಕಿಗೆ ಮೀಸಲಿಡಬೇಕೆಂದು ಆಗ್ರಹಿಸಿದ್ದಾರೆ.