ಸಕಲೇಶಪುರ(ಹಾಸನ) :ಮಲೆನಾಡು ಭಾಗದಲ್ಲಿ ಕಾಡುತ್ತಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಸರ್ಕಾರ ಮುಂದಾಗಬೇಕೆಂದು ಶಾಸಕ ಹೆಚ್ ಕೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
60 ಕಾಡಾನೆ ಓಡಾಡ್ತಿದ್ರೆ ಜನ ಹೇಗೆ ನೆಮ್ಮದಿಯಾಗಿ ನಿದ್ರೆ ಮಾಡ್ತಾರೆ?- ಶಾಸಕ ಹೆಚ್ ಕೆ ಕುಮಾರಸ್ವಾಮಿ ಪ್ರಶ್ನೆ - ಹಾಸನ ಸುದ್ದಿ
ಮಠಸಾಗರ, ಕೃಷ್ಣಾಪುರ, ಹೊಂಕರವಳ್ಳಿ, ಕಬ್ಬಿನಗದ್ದೆ, ಮಳಲಿ, ಕೋಗರವಳ್ಳಿ ಮುಂತಾದ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದೆ. ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ. ಸುಮಾರು 60 ಕಾಡಾನೆ ಈ ಭಾಗದಲ್ಲಿ ಸಂಚರಿಸುತ್ತಿವೆ..
ರಾಷ್ಟ್ರೀಯ ಹೆದ್ದಾರಿ 75ರ ಸಮೀಪದ ಸಕಲೇಶಪುರ ತಾಲೂಕಿನ ಮಠಸಾಗರ ಮತ್ತು ಕೃಷ್ಣಾಪುರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ತಾಲೂಕಿನ ಮಠಸಾಗರ, ಕೃಷ್ಣಾಪುರ, ಹೊಂಕರವಳ್ಳಿ, ಕಬ್ಬಿನಗದ್ದೆ, ಮಳಲಿ, ಕೋಗರವಳ್ಳಿ ಮುಂತಾದ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದೆ. ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ. ಸುಮಾರು 60 ಕಾಡಾನೆ ಈ ಭಾಗದಲ್ಲಿ ಸಂಚರಿಸುತ್ತಿದ್ದು, ಜನಸಾಮಾನ್ಯರಿಗೆ ನೆಮ್ಮದಿಯಿಲ್ಲದಂತಾಗಿದೆ.
ಸರ್ಕಾರ ಕೂಡಲೇ ಕಾಡಾನೆಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾಫಿ ಬೆಳೆಗಾರರು ಮತ್ತು ಕೃಷಿಕರಿಗೆ ಬಾಕಿಯಿರುವ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆಯವರು ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗದ ರೀತಿ ಕೆಲ ಕ್ರಮ ಕೈಗೊಳ್ಳಬೇಕು ಎಂದರು.