ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ.. ಮನಸೆಳೆದ ಡೊಳ್ಳು ಕುಣಿತ - hassan news

ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಜಾನಪದ ನೃತ್ಯ ಎಲ್ಲರ ಗಮನಸೆಳೆಯಿತು. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.

ಹಾಸನದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ

By

Published : Oct 14, 2019, 6:23 PM IST

ಹಾಸನ: ಸಮಾಜದಲ್ಲಿ ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಹಿಂದುಳಿದ ಸಮುದಾಯದ ಜನತೆ ಸದೃಢವಾಗಿ ಬೆಳೆಯಲು ಒಗ್ಗಟ್ಟು ಅತೀ ಮುಖ್ಯ ಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ ಎನ್ ಶ್ವೇತಾ ದೇವರಾಜ್ ತಿಳಿಸಿದರು.

ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಯಕ ಸಮುದಾಯ ಅಥವಾ ಹಿಂದುಳಿದ ಸಮುದಾಯದ ಪ್ರತಿಯೊಬ್ಬರೂ ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಸೂಚಿಸಿದರು.

ಹಾಸನದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ..

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ, ರಾಮಾಯಣ ಕೇವಲ ಗ್ರಂಥವಲ್ಲ, ಪ್ರತಿಯೊಬ್ಬರ ಜೀವನದ ಸ್ಪೂರ್ತಿದಾಯಕವಾಗಿದೆ. ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದರು.

ABOUT THE AUTHOR

...view details