ಕರ್ನಾಟಕ

karnataka

ETV Bharat / state

ನೇಮಕಾತಿ ಅಧಿಸೂಚನೆ ರದ್ದುಪಡಿಸಿ,ಉದ್ಯೋಗ ಭದ್ರತೆಗೆ ಒತ್ತಾಯ: ಅತಿಥಿ ಉಪನ್ಯಾಸಕರ ಪ್ರತಿಭಟನೆ

ಕಾಲೇಜು ಶಿಕ್ಷಣ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಿ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯ್ತು.

guest lectures protest for job security
ಅತಿಥಿ ಉಪನ್ಯಾಸಕರ ಪ್ರತಿಭಟನೆ

By

Published : Aug 18, 2020, 7:38 PM IST

ಹಾಸನ: ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರ ಉದ್ಯೋಗ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿತು.

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ14,564 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಬಿಕ್ಕಟ್ಟಿನಿಂದಾಗಿ 4 ತಿಂಗಳುಗಳಿಂದ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡ್ರು.

ಈ ಮಧ್ಯೆ ಗಾಯದ ಮೇಲೆ ಬರೆ ಎಂಬಂತೆ ಕಾಲೇಜು ಶಿಕ್ಷಣ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಮುಂದಾಗಿದೆ. ಇದರಿಂದ 2,400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಈಗಾಗಲೇ ದೆಹಲಿ, ಹರಿಯಾಣ, ಪಶ್ಚಿಮ ಬಂಗಾಳ ಇತರೆ ರಾಜ್ಯಗಳಲ್ಲಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಇದೆ. ಆದ್ದರಿಂದ ಪ್ರಸ್ತುತ ನೇಮಕಾತಿ ಅಧಿಸೂಚನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು.​ ​

ಇನ್ನು ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ ಧನ ನೀಡಬೇಕೆಂದು ಆಗ್ರಹಿಸಿದರು. ಇಲ್ಲವಾದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ABOUT THE AUTHOR

...view details