ಕರ್ನಾಟಕ

karnataka

ETV Bharat / state

ಸರ್ಕಾರದ ನಿರ್ಲಕ್ಷ್ಯ ಮುಂದುವರೆದರೆ ಕಾರ್ಮಿಕರು ಸಾಯ್ತಾರೆ: ರೇವಣ್ಣ ಗರಂ

ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ 2 ಕೋಟಿ ಹಣ ಬಿಡುಗಡೆ ಮಾಡಿದೆ. ಆದರೆ, ಹಣವನ್ನು ಯಾವುದಕ್ಕೆ ಬಳಸಬೇಕು ಎಂಬುದರ ಬಗ್ಗೆ ಮಾರ್ಗಸೂಚಿ ಬಂದಿಲ್ಲ ಎಂದು ಡಿಸಿ ಹೇಳುತ್ತಾರೆ. ಜಿಲ್ಲಾಧಿಕಾರಿ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ. ಇನ್ನು ಜನ ಸಾಮಾನ್ಯರ ಸಮಸ್ಯೆಗಳು ಹೇಗೆ ತಿಳಿಯುತ್ತದೆ ಎಂದು ಪ್ರಶ್ನಿಸಿದರು.

ಹೆಚ್​ ಡಿ ರೇವಣ್ಣ
ಹೆಚ್​ ಡಿ ರೇವಣ್ಣ

By

Published : Apr 3, 2020, 8:51 PM IST

ಹಾಸನ : ಕೊರೊನಾ ವೈರಸ್‌ ತಡೆಗೆ ಜಾರಿಯಲ್ಲಿರುವ ಲಾಕ್ ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 4 ರಿಂದ 5 ಸಾವಿರ ರೂ. ನೀಡಬೇಕು ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಹೋಟೆಲ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಅಡುಗೆ ಕೆಲಸದವರು, ಆಟೊ ಚಾಲಕರು, ಕಟ್ಟಡ ಕಾರ್ಮಿಕರು ನಿತ್ಯದ ಕೂಲಿ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಕೆಲಸವಿಲ್ಲದೇ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ. ಸರ್ಕಾರದ ನಿರ್ಲಕ್ಷ್ಯ ಹೀಗೆ ಮುಂದುವರೆದರೆ ಶೇಕಡಾ 30 ರಷ್ಟು ಕಾರ್ಮಿಕರು ಹಸಿವಿನಿಂದಲೇ ಸಾಯುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರು ಬೆಳೆದ ಬೆಳೆ ಮಾರಾಟ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಟೊಮೇಟೊ, ಕಲ್ಲಂಗಡಿಯನ್ನು ಬೀದಿಗೆ ತಂದು ಸುರಿಯುತ್ತಿದ್ದಾರೆ. ಸರ್ಕಾರವೇ ಬೆಳೆ ಖರೀದಿಸಿ ರೈತರ ನೆರವಿಗೆ ಧಾವಿಸಬೇಕು ಎಂದ ಅವರು, ಕೊರೊನಾ ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಾಸನ ಸಹಕಾರ ಹಾಲು ಒಕ್ಕೂಟ ನೀಡಿದ್ದ 25 ಕೋಟಿ ರೂ. ಹಣವನ್ನು ಸರ್ಕಾರ ವಾಪಸ್ ಕಳುಹಿಸಿದೆ. ಆ ಹಣವನ್ನು ಕೊಳಗೇರಿ ನಿವಾಸಿಗಳು, ಕಟ್ಟಡ ಕಾರ್ಮಿಕರು, ವಲಸಿಗರು, ಬಡವರಿಗೆ ನಿತ್ಯ ಉಚಿತವಾಗಿ ಹಾಲು ವಿತರಿಸಲು ಉಪಯೋಗಿಸುವಂತೆ ಪತ್ರ ಬರೆದಿದೆ ಎಂದು ವಿವರಿಸಿದರು.

ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ 2 ಕೋಟಿ ಹಣ ಬಿಡುಗಡೆ ಮಾಡಿದೆ. ಆದರೆ, ಹಣವನ್ನು ಯಾವುದಕ್ಕೆ ಬಳಸಬೇಕು ಎಂಬುದರ ಬಗ್ಗೆ ಮಾರ್ಗಸೂಚಿ ಬಂದಿಲ್ಲ ಎಂದು ಡಿಸಿ ಹೇಳುತ್ತಾರೆ. ಜಿಲ್ಲಾಧಿಕಾರಿ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ. ಇನ್ನು ಜನ ಸಾಮಾನ್ಯರ ಸಮಸ್ಯೆಗಳು ಹೇಗೆ ತಿಳಿಯುತ್ತದೆ ಎಂದು ಪ್ರಶ್ನಿಸಿದರು.

ಲಾಕ್​​ಡೌನ್ ಆದೇಶ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯವನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ. ಅಂತಹ ಮದ್ಯದಂಗಡಿಗಳನ್ನು ಗುರುತಿಸಿ, ಪರವಾನಗಿ ರದ್ದು ಮಾಡುವ ಜೊತೆಗೆ ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್‍ ಪ್ರಕರಣ ದಾಖಲು ಮಾಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details