ಕರ್ನಾಟಕ

karnataka

ETV Bharat / state

ಸ್ವಾತಂತ್ರ್ಯದಿನ ಎಂದರೆ ಭಾರತೀಯರ ಸ್ವಾಭಿಮಾನದ ಗೆಲುವಿನ ಸಂಭ್ರಮ - hassan news

73ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಧ್ವಜಾರೋಹಣ ನೆರವೇರಿಸಿ, ಸಂದೇಶ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯ ಸಮರದಲ್ಲಿ ಪಾಲ್ಗೊಂಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸ್ಮರಿಸಿದರು.

ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ, ಸಂದೇಶ ಭಾಷಣ

By

Published : Aug 15, 2019, 5:31 PM IST

ಹಾಸನ : ರಾಜಪ್ರಭುತ್ವ, ವಿದೇಶಿಯರ ಆಳ್ವಿಕೆಯ ದಾಸ್ಯದಿಂದ ಹೊರಬಂದ ಜಗತ್ತಿನ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ ಉದಯಿಸಿದ ಸುದಿನ, ಇದು ಭಾರತದ ಸ್ವಾತಂತ್ರ್ಯ ಸ್ವಾಭಿಮಾನದ ಗೆಲುವಿನ ಸಂಭ್ರಮ ದಿನ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ, ಸಂದೇಶ ಭಾಷಣ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮದು ಶಾಂತಿ ಪ್ರಿಯ ರಾಷ್ಟ್ರ. ಸತ್ಯ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯಗಳಿಸಿದ ನಾಡು. ಈ ದೇಶದ ಸ್ವಾತಂತ್ರ್ಯಕ್ಕೆ ಸಾವಿರಾರು ಜನ ತ್ಯಾಗ-ಬಲಿದಾನ ಮಾಡಿದ್ದಾರೆ. ನಮ್ಮ ಜಿಲ್ಲೆಯ ಹಾರನಹಳ್ಳಿ ರಾಮಸ್ವಾಮಿ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಜಿ.ಎಸ್ ಸಂಪತ್ ಅಯ್ಯಂಗಾರ್ ಸೇರಿದಂತೆ ನೂರಾರು ಮಂದಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎಂದರು.

ರಾಜ್ಯಾದ್ಯಂತ ಭೀಕರ ಪ್ರವಾಹ ಉಂಟಾಗಿ ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ನೆರವಿಗೆ ಧಾವಿಸಿ ಪ್ರವಾಹಕ್ಕೆ ಸಿಲುಕಿರುವವರನ್ನು ರಕ್ಷಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿದೆ. ಎಲ್ಲಾ ಜಿಲ್ಲೆಗಳಿಗೂ ತುರ್ತು ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಜಲ ಸಂರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ ಎಂದು ಹೇಳಿದರು.

ABOUT THE AUTHOR

...view details