ಕರ್ನಾಟಕ

karnataka

ETV Bharat / state

ಹಾಸನ ರಸ್ತೆ ಅಪಘಾತಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ: ಪ್ರಾಥಮಿಕ ತನಿಖೆಯ ಬಗ್ಗೆ ಸಚಿವರ ಮಾಹಿತಿ - ಮೃತ ಕುಟುಂಬಕ್ಕೆ ಈಗಾಗಲೇ ಸಾಂತ್ವನ

ಮೃತ ಕುಟುಂಬಕ್ಕೆ ಈಗಾಗಲೇ ಸಾಂತ್ವನ ಹೇಳಿದ್ದು, ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು. ಸದ್ಯ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

hasan-road-accident-9-were-died
ಹಾಸನ ರಸ್ತೆ ಅಪಘಾತ :ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಕ್ರಮ : ಸಚಿವ ಕೆ.ಗೋಪಾಲಯ್ಯ

By

Published : Oct 17, 2022, 6:43 AM IST

ಹಾಸನ (ಅರಸೀಕೆರೆ): ನಾವು ಎಷ್ಟೇ ಪರಿಹಾರ ಕೊಟ್ಟರೂ ಕುಟುಂಬದವರನ್ನು ಮತ್ತೆ ಬದುಕಿಸಲು ಸಾಧ್ಯವಿಲ್ಲ. ಆದರೆ ಈ ದುರಂತಕ್ಕೆ ಕಾರಣರಾಗಿರುವವರಿಗೆ ತಕ್ಕ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ದೊರಕಿಸಿ ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದರು.

ಜಿಲ್ಲೆಯ ಬಾಣಾವರ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೃತ ಕುಟುಂಬಕ್ಕೆ ಈಗಾಗಲೇ ಸಾಂತ್ವನ ಹೇಳಿದ್ದು, ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು. ಸದ್ಯ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಹಾಸನ ರಸ್ತೆ ಅಪಘಾತ :ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಕ್ರಮ : ಸಚಿವ ಕೆ.ಗೋಪಾಲಯ್ಯ

ಇದು ಆಘಾತಕಾರಿ ವಿಷಯ. ತಮ್ಮ ಕುಟುಂಬಗಳಿಗೆ ಬೆಳಕಾಗಬೇಕಿದ್ದ 5 ಮಕ್ಕಳು ಸಾವನ್ನಪ್ಪಿರುವುದು ಮನಸ್ಸಿಗೆ ತುಂಬಾ ವೇದನೆಯ ವಿಷಯ. ಇಂಥಹ ಕಷ್ಟ ಯಾರಿಗೂ ಬರಬಾರದು. ಈ ಕುಟುಂಬಗಳಿಗೆ ಸರ್ಕಾರ ಸ್ಪಂದಿಸುವ ಸಲುವಾಗಿ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದರು.

ಅಪಘಾತದಲ್ಲಿ ಮೃತಪಟ್ಟವರು

ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೂ ಕೂಡ ಪರಿಹಾರ ನೀಡುವ ಸಂಬಂಧ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯದಿಂದ ದೊಡ್ಡ ಅಪಘಾತವಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ನಾಳೆ ಅಧಿಕಾರಿಗಳ ಸಭೆ ಕರೆದು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗುವುದು ಎಂದರು. ಈ ವೇಳೆ ಶಾಸಕ ಶಿವಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಅಪಘಾತದಲ್ಲಿ ಮೃತಪಟ್ಟವರು

ಇದನ್ನೂ ಓದಿ :ಹಾಸನ ಬಳಿ ಭೀಕರ ಅಪಘಾತಕ್ಕೆ 9 ಮಂದಿ ಸಾವು: 5-6 ಕಿಮೀ ಸಾಗಿದ್ರೆ ಮನೆ ಸೇರ್ತಿದ್ದ ಕುಟುಂಬದ ಮೇಲೆ ಜವರಾಯನ ಅಟ್ಟಹಾಸ

ABOUT THE AUTHOR

...view details