ಹಾಸನ :ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಜಿಲ್ಲೆಯ 8 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಗಿದೆ. ಎಲ್ಲವೂ ನೆಗೆಟಿವ್ ವರದಿ ಬಂದಿರುತ್ತದೆ. ಮುಂಜಾಗ್ರಾತ ಕ್ರಮವಾಗಿ ಚನ್ನರಾಯಪಟ್ಟಣ ತಾಲೂಕಿನ 4 ಗ್ರಾಮಗಳನ್ನು ಸೀಜ್ ಮಾಡಿ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ನಾಗಮಂಗಲದಲ್ಲಿ ಕೋವಿಡ್-19 ಪಾಸಿಟಿವ್ ಎಂದು ಪತ್ತೆಯಾಗಿರುವ ಸೋಂಕಿತನೊಂದಿಗೆ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದ ಎಲ್ಲಾ 9 ಮಂದಿಯನ್ನು ಗುರುತಿಸಲಾಗಿದೆ. ಅದರಲ್ಲಿ ಒಬ್ಬರು ಮುಂಬೈನಲ್ಲಿದ್ದು, ಇನ್ನುಳಿದ 8 ಮಂದಿಯ ಗಂಟಲು ದ್ರವ್ಯವನ್ನು ತಪಾಸಣೆ ಮಾಡಲಾಗಿದೆ. ಅಲ್ಲದೆ 2ನೇ ಹಂತದ ಸಂಪರ್ಕ ಹೊಂದಿದ್ದ 21 ಮಂದಿಯನ್ನು ಹೋಂ ಕ್ವಾರಟೈನ್‌ನಲ್ಲಿಸಿ ಅವರನ್ನು ಪರೀಕ್ಷೆಗೊಳಪಡಿಸಲಾಗಿದೆ. ಇದರಲ್ಲಿ 25 ಮಂದಿಯ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಎಂದು ತಿಳಿಸಿದರು.
ಎಲ್ಲಾ ಪ್ರಾಥಮಿಕ ಹಾಗೂ 2ನೇ ಹಂತದ ಸಂಪರ್ಕ ಹೊಂದಿದ್ದವರನ್ನು 5ನೇ ದಿನದಂದು ಪರೀಕ್ಷೆಗೊಳಪಡಿಸಲಾಗಿದೆ. ನಿಯಾಮಾನುಸಾರ 12ನೇ ದಿನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದ ನಂತರ ನೆಗೆಟಿವ್ ವರದಿ ಬಂದ್ರೆ ಆಸ್ಪತ್ರೆ ಕ್ವಾರಟೈನ್‌ನಲ್ಲಿರುವವರನ್ನು ಕಳುಹಿಸಿಕೊಡಲಾಗುವುದು ಎಂದರು.