ಹಾಸನ:ವಿಶ್ವಪ್ರಸಿದ್ದ ಹಾಸನದ ಹಾಸನಾಂಬೆ ದೇವಾಲಯ ಇಂದಿನಿಂದ ತೆರೆಯಲಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 29ರಿಂದ ನವೆಂಬರ್ 5ರವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8ರವರೆಗೆ ಹಾಸನಾಂಬೆ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಪ್ರತಿದಿನ ಮಧ್ಯಾಹ್ನ 1ರಿಂದ 3ರವರಗೆ ನೈವೇದ್ಯಕ್ಕೆ ಅವಕಾಶವಿದೆ.
ಇದನ್ನೂ ಓದಿರಿ:ಶಿಲ್ಪಾ ಶೆಟ್ಟಿ ದಂಪತಿಯಿಂದ ಮಾನಸಿಕ ಕಿರುಕುಳ... 75 ಕೋಟಿ ರೂ. ಪರಿಹಾರ ಕೇಳಿದ ಶೆರ್ಲಿನ್
ದೇವಿಯ ದರ್ಶನ ಪಡೆದುಕೊಳ್ಳಲು ಇಲ್ಲಿಗೆ ಆಗಮಿಸುವ ಭಕ್ತರು ಕೋವಿಡ್ನ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದ್ದು, ಪ್ರಮಾಣಪತ್ರ ತೋರಿಸುವುದು ಅನಿವಾರ್ಯವಾಗಿದೆ. ಇದರ ಜೊತೆಗೆ ಆಧಾರ್ ಅಥವಾ ವೋಟರ್ ಐಡಿ ತೆಗೆದುಕೊಂಡು ಬರುವಂತೆ ಸೂಚನೆ ನೀಡಲಾಗಿದೆ . ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ವ್ಯಾಕ್ಸಿನ್ ಪಡೆಯದೇ ಬರುವ ಭಕ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಸಚಿವರು ಮಾಹಿತಿ ನೀಡಿದ್ದಾರೆ.
ವಿಶೇಷ ದರ್ಶನಕ್ಕೆ 300 ಮತ್ತು 1000 ರೂ:ಹಾಸನಾಂಬೆಯ ದರ್ಶನಕ್ಕೆ 300 ಹಾಗೂ 1000 ಮುಖಬೆಲೆಯ ಟಿಕೆಟ್ ನಿಗದಿ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಜಾತ್ರೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ.