ಹಾಸನ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೇಮಕಾತಿ ನಡೆಯಲಿದೆ. ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅಂಕಗಳ ಶ್ರೇಷ್ಠತೆಯ ಆಧಾರದಡಿ ಭರ್ತಿಗೆ ಜಿಲ್ಲಾ ಪಂಚಾಯತ್ ಮುಂದಾಗಿದೆ.
ಹುದ್ದೆಗಳು ಯಾವುವು, ಎಷ್ಟು?:
- ತಾಂತ್ರಿಕ ಸಹಾಯಕರು, ತೋಟಗಾರಿಕೆ - 6
- ತಾಂತ್ರಿಕ ಸಹಾಯಕರು, ರೇಷ್ಮೆ - 2
- ತಾಂತ್ರಿಕ ಸಹಾಯಕರು, ಅರಣ್ಯ - 4
ವಿದ್ಯಾರ್ಹತೆ: ತೋಟಗಾರಿಕೆ, ರೇಷ್ಮೆ ಕೃಷಿ ಮತ್ತು ಅರಣ್ಯ ಶಾಸ್ತ್ರದಲ್ಲಿ ಬಿಎಸ್ಸಿ ಅಥವಾ ಎಂಎಸ್ಸಿ ಪದವಿ. ಸಾಮಾನ್ಯ ಕಂಪ್ಯೂಟರ್ ಜ್ಞಾನ.
ವಯೋಮಿತಿ: ಗರಿಷ್ಠ ವಯೋಮಿತಿ 45 ವರ್ಷ.
ವೇತನ: ಮಾಸಿಕ 28 ಸಾವಿರ ರೂಪಾಯಿ.
ವಿಶೇಷ ಸೂಚನೆ: ಈ ಹುದ್ದೆಗಳು ತಾತ್ಕಾಲಿಕ. ಸಂಪೂರ್ಣ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತದೆ. ಹುದ್ದೆಗಳ ಅವಧಿ ಕುರಿತು ಸ್ಪಷ್ಟಪಡಿಸಿಲ್ಲ.
ಆಯ್ಕೆ ಪ್ರಕ್ರಿಯೆ: ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 13 ಕಡೇಯ ದಿನವಾಗಿದೆ.
ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ hassanzp.kar.nic.in ಜಾಲತಾಣಕ್ಕೆ ಭೇಟಿ ನೀಡಬಹುದು.
ವಿವಿಧ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:ಹಾಸನ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳ ಭರ್ತಿಗೂ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವೈದ್ಯರು, ಶುಶ್ರೂಷಕಿ ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆ ಸೇರಿದಂತೆ ಒಟ್ಟು 46 ಹುದ್ದೆ ಭರ್ತಿಗೆ ಅಧಿಸೂಚನೆಯಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಮೆರಿಟ್ ಮೇಲೆ ನೇಮಕಾತಿ ನಡೆಯಲಿದೆ. ಆಸಕ್ತರು hassanzp.kar.nic.inಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Job Alert: ತುಮಕೂರು ಎಚ್ಎಎಲ್ನಲ್ಲಿದೆ ಉದ್ಯೋಗಾವಕಾಶ; 41 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ