ಹಾಸನ: ಜಿಲ್ಲೆಯ ಶ್ರವಣಬೆಳಗೊಳ ಹೋಬಳಿಯ ಕಾಂತರಾಜಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಾಲುಮತಿಘಟ್ಟ ಹಿಮೇಶ್ ಹಾಗೂ ಉಪಾಧ್ಯಕ್ಷರಾಗಿ ನಂಜಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ - etv bharat
ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿತೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಂಜಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
:ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ
ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿತೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಂಜಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಮಮತಾ ಕರ್ತವ್ಯ ನಿರ್ವಹಿಸಿದರು.
ನಂತರ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಪಂಚಾಯ್ತಿ ಸದಸ್ಯರುಗಳು ಮತ್ತು ಚುನಾವಣಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ.ಎಂ.ನಾಗರಾಜು, ಕೆ.ಟಿ.ಮಂಜುನಾಥ್, ಶ್ರೀರಂಗ, ದಿನೇಶ್, ಕ್ಷೇತ್ರಪಾಲ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಮುಂತಾದವರು ಉಪಸ್ಥಿತರಿದ್ದರು.