ಕರ್ನಾಟಕ

karnataka

ETV Bharat / state

ಹಾಸನ: ಕೋವಿಡ್​ 19ಗೆ ಮತ್ತೊಂದು ಬಲಿ... ಸಾವಿನ ಸಂಖ್ಯೆ 5ಕ್ಕೆ ಏರಿಕೆ - ಹಾಸನ ಕೊರೊನಾ ಸುದ್ದಿ

ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬರು ಕೋವಿಡ್-19ಗೆ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 6 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 432ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ‌ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

Hassan: Another death to Kovid 19... death toll rises to 5
ಹಾಸನ: ಕೋವಿಡ್​ 19ಗೆ ಮತ್ತೊಂದು ಬಲಿ... ಸಾವಿನ ಸಂಖ್ಯೆ 5ಕ್ಕೆ ಏರಿಕೆ

By

Published : Jul 2, 2020, 1:31 PM IST

ಹಾಸನ:ಜಿಲ್ಲೆಯಲ್ಲಿ ಮತ್ತೊಬ್ಬರು ಕೋವಿಡ್-19 ಮಹಾಮಾರಿಗೆ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಚನ್ನರಾಯಪಟ್ಟಣದ 65 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ. ವ್ಯಕ್ತಿಯ ಸ್ವಾಬ್(ಗಂಟಲು ದ್ರವ) ಸಂಗ್ರಹಿಸಿ ಕೊರೊನಾ ಪರೀಕ್ಷೆ ನಡೆಸಿದ್ದು, ಸೋಂಕು ದೃಢವಾದ ಹಿನ್ನೆಲೆ ಕಳೆದ‌ ರಾತ್ರಿ 12:45ಕ್ಕೆ ಇವರನ್ನು ಖಾಸಗಿ ಆಸ್ಪತ್ರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬೆಳಗ್ಗೆ 7:45ಕ್ಕೆ ಸಾವು ಸಂಭವಿಸಿದೆ. ಮೃತರು ಮಧುಮೇಹ ರೋಗದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇಂದು ಹೊಸದಾಗಿ 6 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 432ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ‌ಮತ್ತು ಕಟುಂಬ ಕಲ್ಯಾನಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ABOUT THE AUTHOR

...view details