ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 213 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 22118ಕ್ಕೆ ಏರಿಕೆಯಾಗಿದೆ. 1 ಸಾವಿನೊಂದಿಗೆ ಮೃತರ ಸಂಖ್ಯೆ 385ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 295 ಜನರು ಸೇರಿ ಈವರೆಗೆ 17882 ಮಂದಿ ಗುಣಮುಖರಾಗಿದ್ದಾರೆ. 3851 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ತಾಲೂಕುವಾರು ಪ್ರಕರಣ:
ಆಲೂರು-16, ಅರಕಲಗೂಡು-41, ಅರಸೀಕೆರೆ-3, ಬೇಲೂರು-10, ಚನ್ನರಾಯಪಟ್ಟಣ-49, ಹಾಸನ-73, ಹೊಳೆನರಸೀಪುರ-9, ಸಕಲೇಶಪುರ-12 ಸೇರಿದಂತೆ ಇಂದು ಒಟ್ಟು 213 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಆರೋಗ್ಯಧಿಕಾರಿ ಮನವಿ:
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭ ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
- ಆಲೂರು - 796.
- ಅರಕಲಗೂಡು- 2166.
- ಅರಸೀಕೆರೆ - 2666.
- ಬೇಲೂರು - 1590.
- ಚನ್ನರಾಯಪಟ್ಟಣ - 3075.
- ಹಾಸನ - 9297.
- ಹೊಳೆನರಸೀಪುರ - 1618.
- ಸಕಲೇಶಪುರ - 793.
- ಇತರೆ 116 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 22118 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.