ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಕೋವಿಡ್ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಅಧಿಕಾರಿಗಳು - ಹಾಸನ ಕೋವಿಡ್ ಪ್ರಕರಣ

ಹಾಸನದಲ್ಲಿ ಕೋವಿಡ್​ ಪ್ರಕರಣ ಹೆಚ್ಚಳವಾಗಿದ್ದು, ಸೋಮವಾರ 341 ಹೊಸ ಪ್ರಕರಣಗಳು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

Hassan Covid Update'
ಹಾಸನ ಕೋವಿಡ್ ಕೇಸ್

By

Published : Apr 20, 2021, 12:03 PM IST

ಹಾಸನ: ಜಿಲ್ಲೆಯಲ್ಲಿ ಸೋಮವಾರ 341 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕು ಹೆಚ್ಚಾಗುತ್ತಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

ಹಾಸನ, ಅರಸೀಕೆರೆ, ಅರಕಲಗೂಡು ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ದಂಡಾಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಜನರಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೆ.ಆರ್.ಆಸ್ಪತ್ರೆಯ ನಾಲ್ವರು ವೈದ್ಯರಿಗೆ ಕೊರೊನಾ: ಆತಂಕದಲ್ಲಿ ಸಿಬ್ಬಂದಿ

ಅರಸೀಕೆರೆ ನಗರದಲ್ಲಿ ತಹಶೀಲ್ದಾರ್ ಸಂತೋಷ್ ಈಗಾಗಲೇ ಎಲ್ಲಾ ಕಲ್ಯಾಣ ಮಂಟಪಗಳಿಗೆ ಭೇಟಿ ಪರೀಶೀಲನೆ ನಡೆಸಿದ್ದು, ನೂರಕ್ಕಿಂತ ಹೆಚ್ಚು ಜನರನ್ನು ಕಾರ್ಯಕ್ರಮಗಳಿಗೆ ಸೇರಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಸನದಲ್ಲೂ ನಗರಸಭೆ ವ್ಯಾಪ್ತಿಯ ಕಲ್ಯಾಣ ಮಂಟಪಗಳಿಗೆ ಅಧಿಕಾರಿಗಳು ಭೇಟಿ ನೀಡಿ ಮಾರ್ಗಸೂಚನೆ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಅರಕಲಗೂಡು ತಾಲೂಕಿನಲ್ಲಿ ಕೋವಿಡ್ ಸೋಂಕಿತರು ನಿಯಮ ಪಾಲಿಸದೆ ಊರೆಲ್ಲಾ ಓಡಾಡುತ್ತಿದ್ದಾರೆ. ಅಧಿಕಾರಿಗಳು ತಿಳಿ ಹೇಳಲು ಪ್ರಯತ್ನಿಸಿದರೆ ಅಧಿಕಾರಿಗಳಿಗೆ ಬೈಯುತ್ತಿದ್ದಾರೆ. ರೋಗ ಲಕ್ಷಣಗಳು ಇರುವವರು ಈ ರೀತಿ ಹೊರಗಡೆ ಓಡಾಡುತ್ತಿರುವ ಬಗ್ಗೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದು, ಈಗಾಗಲೇ ಉಪವಿಭಾಗಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details