ಹಾಸನ : ಕಳೆದೆರಡು ದಿನಗಳಿಂದ ಮೂನ್ನೂರರ ಗಡಿ ದಾಟಿದ್ದ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ, ಇಂದೂ ಕೂಡ ಅದೇ ರೀತಿ ಮುಂದುವರೆದಿದೆ. ಇಂದು 309 ಹೊಸ ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ.
ಇದುವರೆಗೂ ಜಿಲ್ಲೆಯಲ್ಲಿ 17, 470 ಮಂದಿಗೆ ಸೋಂಕು ತಗುಲಿದೆ. ಈಗಾಗಲೇ 3,558 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 211 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 13,571 ಮಂದಿ ಕೊರೊನಾ ಮುಕ್ತರಾಗಿದ್ದಾರೆ. ಇಂದು 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 341 ಮಂದಿ ಮೃತಪಟ್ಟಿದ್ದಾರೆ. ಒಟ್ಟು 49 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.