ಕರ್ನಾಟಕ

karnataka

ETV Bharat / state

'ಜನರ, ಕ್ಷೇತ್ರದ ಅಭಿವೃದ್ಧಿಗೆ ರೂಪಿಸಿದ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಿ' - ಗ್ರಾಮೀಣ ಶುದ್ಧ ಕುಡಿಯುವ ನೀರಿನ ಘಟಕ]

ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್​​ರಾಜ್ ಸಿಂಗ್ ತಿಳಿಸಿದರು.

Hassan District Progress Review Meeting
ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

By

Published : Dec 17, 2019, 11:34 PM IST

ಹಾಸನ: ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅದಕ್ಕಾಗಿ ಎಲ್ಲಾ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಮೈಸೂರು ಮಿನರಲ್ಸ್​​​​ನ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್​​ರಾಜ್ ಸಿಂಗ್ ಸೂಚಿಸಿದರು.

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಮಳೆ, ಬರ ಪರಿಹಾರ, ಕುಡಿಯುವ ನೀರು, ಆರೋಗ್ಯ, ವಸತಿ ಮತ್ತು ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳ ಸಮಸ್ಯೆಗಳನ್ನು ಕೂಲಂಕಷವಾಗಿ ಗಮನಿಸಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ರೈತರ ಆತ್ಮಹತ್ಯೆ ಪ್ರಕರಣಗಳನ್ನು ಬಾಕಿ ಉಳಿಸದೆ ಶೀಘ್ರ ಇತ್ಯರ್ಥಗೊಳಿಸಿ ಪರಿಹಾರ ವಿತರಿಸಬೇಕು. ಬೇಡಿಕೆಗೆ ತಕ್ಕಂತೆ ರಾಗಿ, ಭತ್ತದ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಗೆ ಅನುಗುಣವಾಗಿ ಖರೀದಿ ಮಾಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಬಾಕಿಯಿರುವ 130 ಶಾಲೆ ಹಾಗೂ ಅಂಗನವಾಡಿಗಳ ದುರಸ್ತಿ ಕೆಲಸಗಳನ್ನು ತುರ್ತಾಗಿ ಮುಗಿಸುವಂತೆ ಸೂಚಿಸಿದಲ್ಲದೆ, ಸಣ್ಣ ಸಮಸ್ಯೆಗಳ ಸಲುವಾಗಿ ಕಾಮಗಾರಿ ಆರಂಭಿಸದಿದ್ದರೆ ಜಿಲ್ಲೆ ಅಭಿವೃದ್ಧಿ ಕಾರ್ಯದಲ್ಲಿ ಹಿಂದುಳಿಯುತ್ತದೆ. ಅದಕ್ಕೆ ಅವಕಾಶ ನೀಡಬಾರದು ಎಂದು ಪಿಆರ್​​​ಇಡಿ ಅಧಿಕಾರಿಗಳಿಗೆ ಹೇಳಿದರು.

ನಿರ್ಮಾಣ ಕಾರ್ಯಗಳಿಗೆ ಮರಳಿನ ಕೊರತೆಯಾಗದಂತೆ ಗಮನ ಹರಿಸುವಂತೆ ಹೇಳಿದ ಅವರು, ಸರ್ಕಾರದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಕೂಲವಾಗುವಂತೆ ಮೈಸೂರು ಮಿನರಲ್ಸ್ ವತಿಯಿಂದ ಎಮ್ ಸ್ಯಾಂಡ್ ತಯಾರಿಕಾ ಘಟಕ ಸ್ಥಾಪಿಸಿ ಕೊಡಲಾಗುವುದು. ಅದಕ್ಕಾಗಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೂಕ್ತವಾದ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು .

ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕಾಲಕಾಲಕ್ಕೆ ಸರಿಯಾಗಿ ವೇತನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾದ್ಯಂತ ಸ್ಥಾಪಿಸಲಾಗಿರುವ ಗ್ರಾಮೀಣ ಶುದ್ಧ ಕುಡಿಯುವ ನೀರಿನ ಘಟಕಗಳು ನಿರಂತರವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅವುಗಳ ವಾರ್ಷಿಕ ನಿರ್ವಹಣೆ ಜೊತೆಗೆ ಜಿಲ್ಲೆಯಲ್ಲಿರುವ ಎಲ್ಲ ಹಳ್ಳಿಗಳಿಗೆ ಪೈಪ್‍ಲೈನ್ ಮೂಲಕವೇ ಕುಡಿಯುವ ನೀರಿನ ಸರಬರಾಜು ಆಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಶಾಲೆಗಳ ಅಧ್ಯಾಪಕರ ಬಲವಂತಕ್ಕೆ ಮಣಿಯದೆ ಮಕ್ಕಳು ಅಪಾಯವಿರುವ ಕಟ್ಟಡಗಳಲ್ಲಿ ಕಲಿಯುವುದನ್ನು ತಪ್ಪಿಸಿ, ಪರ್ಯಾಯ ಸ್ಥಳದ ವ್ಯವಸ್ಥೆ ಮಾಡಿಸಿ. ಕಟ್ಟಡಗಳನ್ನು ದುರಸ್ಥಿ ಕಾರ್ಯಕ್ಕಾಗಿ ಪಡೆದುಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಅತಿವೃಷ್ಠಿ ನಿರ್ವಹಣೆ ಕ್ರಮಗಳನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ. ಮನೆ, ಬೆಳೆ ಪರಿಹಾರ ವಿತರಣೆಗೂ ಕ್ರಮ ವಹಿಸಲಾಗಿದೆ ಎಂದರು. ಅತಿವೃಷ್ಠಿಯಲ್ಲಿ ಹಾನಿಗೀಡಾಗಿರುವ ರಸ್ತೆಗಳನ್ನು ಹಾಗೂ ಕೆರೆಕಟ್ಟೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಿ, ಬಾಕಿಯಿರುವ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಇಲಾಖೆ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು. ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ, ರೇಡಿಯಾಲಜಿಸ್ಟ್, ಫಾರ್ಮಸಿಸ್ಟ್‍ಗಳ ಕೊರತೆ ಬಗ್ಗೆ ಚರ್ಚಿಸಲಾಯಿತು.

ABOUT THE AUTHOR

...view details