ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಕೊರೊನಾ ಉಲ್ಬಣ: ಕೋವಿಡ್​ ನಿಯಮ ಪಾಲಿಸುವಂತೆ ಆರೋಗ್ಯಾಧಿಕಾರಿ ಮನವಿ - ಕೊರೊನಾ ವೈರಸ್​​

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 112 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಕೋವಿಡ್​ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ಆರೋಗ್ಯಾಧಿಕಾರಿ ಸತೀಶ್​ ಮನವಿ ಮಾಡಿದ್ದಾರೆ.

hassan health officer sathish pressmeet
ಆರೋಗ್ಯಾಧಿಕಾರಿ ಸತೀಶ್

By

Published : Oct 27, 2020, 4:58 PM IST

ಹಾಸನ: ಜಿಲ್ಲೆಯಲ್ಲಿಂದು ಹೊಸದಾಗಿ 112 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 24,360 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ಮಾಹಿತಿ ನೀಡಿದ್ದಾರೆ.

ಆರೋಗ್ಯಾಧಿಕಾರಿ ಸತೀಶ್ ಮಾಹಿತಿ

ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 417 ತಲುಪಿದೆ. ಇಂದು ಯಾವುದೇ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿಲ್ಲ ಎಂದು ಸತೀಶ್​ ತಿಳಿಸಿದ್ದಾರೆ. ಇಂದು ಬಿಡುಗಡೆಯಾದ 256 ಜನರು ಸೇರಿ ಈವರೆಗೆ 22,613 ಮಂದಿ ಗುಣಮುಖರಾಗಿದ್ದಾರೆ. 1330 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 45 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲೂಕುವಾರು ಪ್ರಕರಣ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-5, ಅರಕಲಗೂಡು-7, ಅರಸೀಕೆರೆ-2, ಬೇಲೂರು-3, ಚನ್ನರಾಯಪಟ್ಟಣ-22, ಹಾಸನ-61, ಹೊಳೆನರಸೀಪುರ-5, ಸಕಲೇಶಪುರ-5, ಇತರೆ- 2 ಸೇರಿ ಒಟ್ಟು 112 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಹಾಸನ ಕೋವಿಡ್​ ವರದಿ
ಆರೋಗ್ಯಾಧಿಕಾರಿ ಮನವಿ:ಜಿಲ್ಲೆಯಲ್ಲಿ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ABOUT THE AUTHOR

...view details