ಹಾಸನ:ದಿನದಿಂದ ದಿನಕ್ಕೆ ಹಾಸನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಆಕ್ಸಿಜನ್ ಒದಗಿಸುವುದು ದೊಡ್ಡ ಸವಾಲಾಗಿದೆ. ಅಲ್ಲದೇ ಹಾಸನದ ಹಿಮ್ಸ್ ಸರ್ಕಾರಿ ಆಸ್ಪತ್ರೆಗೆ ಉಸಿರಾಟದ ಸಮಸ್ಯೆಯಿಂದ ಬರುವ ರೋಗಿಗಳಿಗೆ ಆಮ್ಲಜನಕ ನೀಡಲು ವೆಂಟಿಲೇಟರ್ ಮತ್ತು ಬೆಡ್ಗಳ ಸಮಸ್ಯೆ ಎದುರಾಗಿದೆ.
ಈ ಕಾರಣಕ್ಕಾಗಿ ಕೊರೊನಾ ರೋಗಿಗಳ ಅನುಕೂಲಕ್ಕಾಗಿ ಹಾಸನದಲ್ಲಿ ಆಕ್ಸಿಜನ್ ಬಸ್ ಸೇವೆ ಪ್ರಾರಂಭವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಕೆಎಸ್ಆರ್ಟಿಸಿ ಸಂಸ್ಥೆ ಜಿಲ್ಲಾಡಳಿತಕ್ಕೆ ಇಂದು ಹಸ್ತಾಂತರ ಮಾಡಲಿದೆ. ಹಾಸನದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭವಾಗುತ್ತಿದ್ದು, ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಈ ಬಸ್ ಹೆಚ್ಚು ಪ್ರಯೋಜನಕಾರಿಯಾಗಿರಲಿದೆ.