ಹಾಸನ: ವೇಶ್ಯಾವಾಟಿಕೆ ನಡೆಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಹಾಸನ ನಗರದ ಬಡಾವಣೆಯೊಂದರ ಮನೆಯಲ್ಲಿ ಇಬ್ಬರು ಯುವತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಾಸನ ನಗರ ಮತ್ತು ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಜಾಲದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳು ಅಂದರ್ ಚೇತನ್, ಅಕ್ಬರ್, ಸತೀಶ್, ಗೀತಾ ಹಾಗೂ ಮಂಜುಳಾ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳು. ನಗರ ಠಾಣೆ ಮತ್ತು ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ನಗರದ ಎರಡು ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಲಾರಿ ಮಾಲೀಕರಿಂದ ಸುಲಿಗೆ ಮಾಡಲು ಕಂಡುಕೊಂಡ ದಾರಿ ಎಂಥಾದ್ದು ಗೊತ್ತೇ..? ಮುಂದೆ ಆಗಿದ್ದಾದರೂ ಏನು?
ಈ ಸಂಬಂಧ ಹಾಸನ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಷ್ಟು ಶೋಧಕಾರ್ಯ ನಡೆಯುತ್ತಿದೆ.