ಹಾಸನ: ಇಲ್ಲಿನ ಸಕಲೇಶಪುರದ ರೋಟರಿ ಶಿಕ್ಷಣ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ದೇಣಿಗೆ ನೀಡಿಲಾಯಿತು. ರೋಟರಿ ಸಂಸ್ಥೆ ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ನಿಧಿಗೆ ದೇಣೀಗೆ ಹಣ ನೀಡಿರುವುದು ಶ್ಲಾಘನೀಯ ಎಂದು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಹೇಳಿದರು.
ಪ್ರಧಾನಮಂತ್ರಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ ಹಾಸನದ ರೋಟರಿ ಕ್ಲಬ್
ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲಾಯಿತು.
ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ ಚೆಕ್ ಪಡೆದ ನಂತರ ಮಾತನಾಡಿದ ಗಿರೀಶ್, ದೇಶ ಕೊರೊನಾದಿಂದ ಸಮಸ್ಯೆ ಎದುರಿಸುತ್ತಿದೆ. ಈ ಹಿನ್ನೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 1,11,111 ರೂ.ಗಳನ್ನು ನೀಡಿರುವುದು ಶ್ಲಾಘನೀಯ ಎಂದರು.
ರೋಟರಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಆರ್.ಎನ್.ಕೃಷ್ಣಮೂರ್ತಿ ಮಾತನಾಡಿ, ರೋಟರಿ ಶಿಕ್ಷಣ ಸಂಸ್ಥೆ, ಗಣಪಯ್ಯ ಕಿವುಡು ಮತ್ತು ಮೂಗರ ಶಾಲೆ, ರೋಟರಿ ಕ್ಲಬ್ ವತಿಯಿಂದ ಸಿಬ್ಬಂದಿಯ ಒಂದು ದಿನದ ಸಂಬಳವನ್ನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ಪರಿನಿಧಿಗೆ ತಲಾ 1,11,111 ರೂ.ಗಳಂತೆ ನೀಡಲಾಗುತ್ತಿದೆ. ಜೊತೆಗೆ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಸಂಸ್ಥೆ ವತಿಯಿಂದ ಮಾಸ್ಕ್ ನೀಡಲಾಗುತ್ತಿದೆ ಎಂದರು.