ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ದೇವಾಲಯದ ಬಾಗಿಲು ತೆರೆದಿದ್ದು, ಎರಡನೇ ದಿನವಾದ ಇಂದು ತಾಯಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ಅಧಿದೇವತೆ ಹಾಸನಾಂಬೆಯ ದರ್ಶನಕ್ಕೆ ಹರಿದು ಬರ್ತಿದೆ ಜನಸಾಗರ
ವರ್ಷಕ್ಕೊಮ್ಮೆ ಭಕ್ತರಿಗೆ ದರುಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲನ್ನು ನಿನ್ನೆ ತೆರೆಯಲಾಗಿತ್ತು. ಎರಡನೇ ದಿನವಾದ ಇಂದು ತಾಯಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ಹಾಸನಾಂಬೆ
ದೇಗುಲದ ಬಾಗಿಲು ತೆರೆದ ಮೊದಲ ದಿನವಾದ ಗುರುವಾರ ವಿಶೇಷ ಪೂಜಾ ಕೈಂಕರ್ಯ ಹಾಗೂ ನೈವೇದ್ಯ ಕಾರ್ಯಕ್ರಮದಿಂದಾಗಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ನಾಡಿನಾದ್ಯಂತ ಹೆಸರುವಾಸಿಯಾಗಿರುವ ಹಾಸನಾಂಬೆಯ ದರ್ಶನಕ್ಕೆ ಇಂದು ಬೆಳಗಿನ ಜಾವ 3 ಗಂಟೆಯಿಂದಲೇ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಗಂಟೆಗಟ್ಟಲೆ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹರಕೆ ಹೊತ್ತ ಮಹಿಳೆಯರು ಹಸಿರು ಸೀರೆ, ಬಳೆ, ಮಡಲಕ್ಕಿಯನ್ನು ದೇವಿಗೆ ಸಮರ್ಪಿಸಿ ಭಕ್ತಿಯಿಂದ ಮಿಂದೇಳುತ್ತಿದ್ದಾರೆ.